ಅಪೌಷ್ಟಿಕತೆ ಹೋಗಲಾಡಿಸಲು ಶ್ರಮಿಸಲಿ

2 SVR 1
Published on

ಸವಣೂರ: ರಾಷ್ಟ್ರೀಯ ಪೋಷಣ ಅಭಿಯಾನ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸರ್ಕಾರ ಸಂಬಂಧಪಟ್ಟ ಇಲಾಖೆ ಸಿಬ್ಬಂದಿಗೆ ವಿತರಿಸಿರುವ ಸ್ಮಾರ್ಟ್​ಪೋನ್ ಅನ್ನು ಸದುಪಯೋಗ ಪಡಿಸಿಕೊಂಡು ಕಾರ್ಯ ಪ್ರವೃತ್ತರಾಗಬೇಕು ಎಂದು ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು.

ಪಟ್ಟಣದ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸೋಮವಾರ ಏರ್ಪಡಿಸಿದ್ದ ರಾಷ್ಟ್ರೀಯ ಪೋಷಣ ಅಭಿಯಾನ ಯೋಜನೆಯಡಿ ಸ್ಮಾರ್ಟ್​ಪೋನ್ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮೇಲ್ವಿಚಾರಕಿಯರಿಗೆ ಸ್ಮಾರ್ಟ್​ಪೋನ್ ವಿತರಿಸಿ ಅವರು ಮಾತನಾಡಿದರು. ತಾಲೂಕಿನಲ್ಲಿ ಸೂಕ್ತ ನಿರ್ವಹಣೆ ಮೂಲಕ ಉತ್ತಮ ಕಾರ್ಯ ನಿರ್ವಹಿಸಿ ಸೂಕ್ತ ಫಲಾನುಭವಿಗಳನ್ನು ಗುರುತಿಸಿ ಅಪೌಷ್ಟಿಕತೆ ಹೋಗಲಾಡಿಸಲು ಸರ್ವರೂ ಶ್ರಮಿಸಬೇಕು ಎಂದರು.

211 ಅಂಗನವಾಡಿ ಕಾರ್ಯಕರ್ತೆರಿಗೆ, 9 ಅಂಗನವಾಡಿ ಮೇಲ್ವಿಚಾರಕಿಯರಿಗೆ ಹಾಗೂ ಪೋಷಣ ಅಭಿಯಾನ ಯೋಜನೆಯ ತಾಲೂಕು ಸಂಯೋಜಕಿ ಸೇರಿ ಒಟ್ಟು 221 ಸ್ಮಾರ್ಟ್​ಪೋನ್ (ಮೊಬೈಲ್​ಫೋನ್) ವಿತರಿಸಲಾಯಿತು. ಸಿಡಿಪಿಒ ಉಮಾ ಕೆ.ಎಸ್., ಪ್ರಾಸ್ತಾವಿಕವಾಗಿ ಮಾತನಾಡಿದರು.

ತಹಸೀಲ್ದಾರ್ ಭರತರಾಜ್ ಕೆ.ಎನ್., ತಾಪಂ ಇಒ ನವೀನಪ್ರಸಾದ ಕಟ್ಟಿಮನಿ, ಹಿರಿಯ ಮೇಲ್ವಿಚಾರಕಿ ಮಾಲಾ ಬಳಿಗಾರ, ಮೇಲ್ವಿಚಾರಕಿಯರಾದ ಸುಜಾತ ಬೆಟಗೇರಿ, ಉಷಾ ಬಾಗಲಕೋಟಿ, ಇತರರಿದ್ದರು. ಪೋಷಣ ಅಭಿಯಾನ ಯೋಜನೆಯ ತಾಲೂಕು ಸಂಯೋಜಕಿ ರೇಷ್ಮಾ ಕೇಸಕ್ಕಿ ಕಾರ್ಯಕ್ರಮ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net