ದೆಹಲಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭೂಕಂಪ; 3.1ರಷ್ಟು ತೀವ್ರತೆ ದಾಖಲು

Earthquake
Published on

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾನುವಾರ ಮಧ್ಯಾಹ್ನ ಭೂಕಂಪ ಸಂಭವಿಸಿದ್ದು, ರಿಕ್ಟರ್​ ಮಾಪನದಲ್ಲಿ 3.1ರಷ್ಟು ತೀವ್ರತೆ ದಾಖಲಾಗಿದೆ.

ಸಂಜೆ 4 ಘಂಟೆ ಸುಮಾರಿಗೆ ಭೂಕಂಪ ಸಂಭವಿಸಿದ್ದು, ನೋಯ್ಡಾ, ಗುರುಗ್ರಾಮ, ಫರಿದಾಬಾದ್, ಗಾಜಿಯಾಬಾದ್​ನಲ್ಲೂ ಸಹ ಭೂಮಿ ಕಂಪಿಸಿದೆ. ಭೂ ಕಂಪನದಲ್ಲಿ ಅದೃಷ್ಟವಶಾತ್​ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಹರಿಯಾಣದ ಫರಿದಾಬಾದ್ನಲ್ಲಿ ಸಂಜೆ 4.08 ಕ್ಕೆ ಭೂಕಂಪನ ಸಂಭವಿಸಿದೆ.

ಕಳೆದ ಕೆಲವು ದಿನಗಳ ಹಿಂದೆ ಪಶ್ಚಿಮ ನೇಪಾಳದಲ್ಲಿ 6.2 ತೀವ್ರತೆಯ ಭೂಕಂಪ ಸಂಭವಿಸಿತ್ತು. ಇದಾದ ಬಳಿಕ ದೆಹಲಿ ಹಾಗೂ ಮತ್ತು ಉತ್ತರ ಭಾರತದ ಕೆಲವು ಭಾಗಗಳಲ್ಲಿ ಪ್ರಬಲವಾದ ಭೂಕಂಪನದ ಅನುಭವವಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net