More

    ಸರ್ಕಾರದ ಈ ಆದೇಶಕ್ಕೆ ಸಾರ್ವಜನಿಕರಿಂದ ತೀವ್ರ ಆಕ್ಷೇಪ!; ಆರ್ಡರ್ ಹಿಂಪಡೆಯಲು ಆಗ್ರಹ..

    ಬೆಂಗಳೂರು: ಸರ್ಕಾರದ ಯಾವುದೇ ಕಚೇರಿಗಳಲ್ಲಿ ಇನ್ನು ಮುಂದೆ ಖಾಸಗಿ ವ್ಯಕ್ತಿಗಳು ಫೋಟೋ ತೆಗೆಯುವುದು ಹಾಗೂ ವಿಡಿಯೋ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಸರ್ಕಾರ ಹೊರಡಿಸಿರುವ ಆದೇಶಕ್ಕೆ ಸಾರ್ವಜನಿಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

    ಕೆಲವು ಖಾಸಗಿ ವ್ಯಕ್ತಿಗಳು ಸರ್ಕಾರಿ ಕಚೇರಿಗಳಿಗೆ ಬಂದು ಕಚೇರಿಯ ಫೋಟೋ/ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವ ಹಾಗೂ ಇಂತಹ ಫೋಟೋ/ ವಿಡಿಯೋಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದರಿಂದಾಗಿ ಸಂಬಂಧಿಸಿದ ಇಲಾಖೆ ಹಾಗೂ ಸರ್ಕಾರದ ಘನತೆಗೆ ಕುಂದು ಉಂಟಾಗುತ್ತಿದೆ. ವಿಶೇಷವಾಗಿ ಮಹಿಳಾ ನೌಕರರಿಗೆ ಸಮಸ್ಯೆ ಉಂಟಾಗುತ್ತಿರುವುದರಿಂದ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಫೊಟೋ/ವಿಡಿಯೋ ಮಾಡದಂತೆ ನಿಷೇಧಿಸಲಾಗಿದೆ ಎಂದು ಸರ್ಕಾರ ಹೊರಡಿಸಿರುವ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

    ಈ ಆದೇಶ ಹೊರಬೀಳುತ್ತಿದ್ದಂತೆ ಸಾರ್ವಜನಿಕರು ಒಂದೇ ಸಮನೆ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದು, ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಲ್ಲದೆ, ಈ ವಿಷಯದಲ್ಲಿ ಸರ್ಕಾರದ ನಿಲುವಿನ ಕುರಿತು ಅಸಮಾಧಾನ ತೋರಿದ್ದಾರೆ. ಸಾರ್ವಜನಿಕರ ಹಿತಾಸಕ್ತಿಗಾಗಿ ಆದೇಶಗಳನ್ನು ಜಾರಿ ಮಾಡುತ್ತಿದ್ದ ಸರ್ಕಾರ ಈಗ ನೌಕರರ ಹಿತಾಸಕ್ತಿಗಾಗಿ ಆದೇಶ ಜಾರಿ ಮಾಡುತ್ತಿದೆ ಎಂದೂ ಟೀಕಿಸಿದ್ದಾರೆ.

    ಇದನ್ನೂ ಓದಿ: ಸರ್ಕಾರದ ಎಲ್ಲಾ ಕಚೇರಿಗಳಲ್ಲಿ ಇನ್ಮುಂದೆ ಫೋಟೋ/ವಿಡಿಯೋ ಬ್ಯಾನ್​: ಹೊರಟಿದೆ ಈ ಸುತ್ತೋಲೆ 

    ಸರ್ಕಾರದ ಈ ಆದೇಶ ಭ್ರಷ್ಟಾಚಾರಕ್ಕೇ ಕುಮ್ಮಕ್ಕು ಕೊಟ್ಟಂತಿದೆ. ಪಾರದರ್ಶಕ ಆಡಳಿತ ಎಂದು ಹೇಳುವ ಸರ್ಕಾರ ಗೌಪ್ಯತೆಗೆ ಒತ್ತು ನೀಡುವ ಮೂಲಕ ಭ್ರಷ್ಟಾಚಾರ ಹೆಚ್ಚಾಗಲು ದಾರಿ ಮಾಡಿಕೊಡುತ್ತಿದೆ ಎಂದು ನೆಟ್ಟಿಗರು ಕುಟುಕಲಾರಂಭಿಸಿದ್ದಾರೆ. ಈ ವಿಷಯದಲ್ಲಿ ಪಕ್ಷಾತೀತವಾಗಿ ವಿರೋಧ ವ್ಯಕ್ತವಾಗುತ್ತಿದ್ದು, ಆಡಳಿತಾರೂಢ ಬಿಜೆಪಿಯನ್ನು ಬೆಂಬಲಿಸುವವರೂ ಈ ಆದೇಶದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರು ಈ ಆದೇಶವನ್ನು ಸರ್ಕಾರ ಕೂಡಲೇ ಹಿಂಪಡೆಯಬೇಕು ಎಂದೂ ಆಗ್ರಹಿಸಿದ್ದಾರೆ.

    ಕಾರು ಚಲಾಯಿಸುತ್ತಿರುವಾಗಲೇ ಹೃದಯಾಘಾತ; ಹೊಲಕ್ಕೆ ನುಗ್ಗಿದ ವಾಹನ, 29 ವರ್ಷದ ಇಂಜಿನಿಯರ್ ಸಾವು..

    ಇಪ್ಪತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದ ಶಾಲಾ ಬಸ್​ ಪಲ್ಟಿ; ಚಾಲಕನ ನಿರ್ಲಕ್ಷ್ಯ ಆರೋಪ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts