ಸಿರಗುಪ್ಪ: ನಗರದ ವಿವೇಕಾನಂದ ಶಾಲೆಯಲ್ಲಿರುವ ಸ್ಟ್ರಾಂಗ್‌ರೂಮ್‌ಗೆ ಜಿಲ್ಲಾಧಿಕಾರಿ ಪ್ರಶಾಂತ್‌ಕುಮಾರ್ ಮಿಶ್ರಾ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು.
ಕೊಪ್ಪಳ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಸಿರಗುಪ್ಪ ವಿಧಾನಸಭಾ ಕ್ಷೇತ್ರಕ್ಕೆ ಬೇಕಾದ ಮತಪೆಟ್ಟಿಗೆಗಳನ್ನು ಸ್ಟ್ರಾಂಗ್‌ರೂಮ್‌ನಲ್ಲಿ ಭದ್ರಪಡಿಸಲಾಗಿದೆ. ಚುನಾವಣೆಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ಏ.5ರಂದು ತರಬೇತಿ ನೀಡಲು ಸಿದ್ಧತೆ ಮಾಡಿಕೊಳ್ಳಬೇಕೆಂದು ತಹಸೀಲ್ದಾರ್ ಶಂಶಾಲಂಗೆ ಡಿಸಿ ಸೂಚಿಸಿದರು.
ಅಲ್ಲದೆ ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಸುವ ಉದ್ದೇಶದಿಂದ ಚುನಾವಣೆಯಲ್ಲಿ ಕೆಲ ಮಾಡುವ ಸಿಬ್ಬಂದಿಗೆ ನುರಿತ ತರಬೇತುದಾರರಿಂದ ತರಬೇತಿ ಕೊಡಿಸಲಾಗುತ್ತಿದ್ದು, ಎಲ್ಲರೂ ಪಾಲ್ಗೊಳ್ಳಬೇಕೆಂದು ತಿಳಿಸಿದರು. ತಹಸೀಲ್ದಾರ್ ಶಂಶಾಲಂ, ತಾಲೂಕು ಕಚೇರಿ ಸಿಬ್ಬಂದಿ ನವೀನ್‌ಕುಮಾರ್, ಪರಮೇಶ್ವರ, ಬಸವರಾಜ್ ಇದ್ದರು.