More

    ಸಾಮಾಜಿಕ ನ್ಯಾಯಕ್ಕೆ ಹೋರಾಟ

    ಎನ್.ಆರ್.ಪುರ: ಅಸ್ಪಶ್ಯತೆ, ಜಾತಿ ಪದ್ಧತಿ ವಿರುದ್ಧ, ಸಾಮಾಜಿಕ ನ್ಯಾಯಕ್ಕೆ ಹೋರಾಟ ನಡೆಸಿದ ಧೀಮಂತ ಡಾ. ಬಿ.ಆರ್.ಅಂಬೇಡ್ಕರ್ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ. ಧನಂಜಯ ಹೇಳಿದರು.

    ತಾಲೂಕು ಕಚೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ಅಂಬೇಡ್ಕರ್ ಜೀವನ ಚರಿತ್ರೆಯನ್ನು ನಾವು ಓದಿದರೆ ಮಾತ್ರ ಅಸ್ಪಶ್ಯತೆ ವಿರುದ್ಧ, ಸಾಮಾಜಿಕ ನ್ಯಾಯಕ್ಕಾಗಿ ಎಷ್ಟು ಹೋರಾಟ ಮಾಡಿದ್ದಾರೆ ಎಂಬುದು ತಿಳಿಯುತ್ತದೆ. ಎಲ್ಲರಿಗೂ ಸಮಾನ ಹಕ್ಕು ದೊರಕಿಸುವ ಉದ್ದೇಶದಿಂದ ದೇಶಕ್ಕೆ ಶ್ರೇಷ್ಠ ಸಂವಿಧಾನವನ್ನು ಕೊಡುಗೆಯಾಗಿ ನೀಡಿದರು ಎಂದರು.
    ಅವರು ಎಂದಿಗೂ ಆಸ್ತಿ, ಐಶ್ವರ್ಯಕ್ಕೆ ಜೋತು ಬಿದ್ದವರಲ್ಲ. ಅವರ ಜೀವನ ಎಲ್ಲರಿಗೂ ಮಾದರಿ. ದಲಿತರಿಗೆ, ಶೋಷಿತರಿಗೆ ಸಮಾಜದಲ್ಲಿ ಹೊಸ ಬದುಕನ್ನು ಕಟ್ಟಿಕೊಟ್ಟಿದ್ದಾರೆ. ಜಾತೀಯತೆ ಹೋಗಲಾಡಿಸಲು ಸಹೋದರತ್ವದ ಬೀಜ ಬಿತ್ತಿದವರು ಅಂಬೇಡ್ಕರ್ ಎಂದು ಬಣ್ಣಿಸಿದರು.
    ತಹಸೀಲ್ದಾರ್ ಎಂ.ಎಸ್.ರಮೇಶ ಮಾತನಾಡಿ, ಸಂವಿಧಾನದ ಮೂಲಕ ಎಲ್ಲ ಸಮುದಾಯದವರೂ ಹಕ್ಕುಗಳನ್ನು ಪಡೆಯಲು ಸಾಧ್ಯವಾಗುತ್ತಿದೆ ಎಂದರು.
    ದಲಿತ ಮುಖಂಡರಾದ ಡಿ.ರಾಮು, ಎಚ್.ಎಂ.ಶಿವಣ್ಣ, ಬಿಇಒ ಕೆ.ಆರ್.ಪುಷ್ಪಾ, ಪಪಂ ಮುಖ್ಯಾಧಿಕಾರಿ ಆರ್.ವಿ.ಮಂಜುನಾಥ್, ಸಾಮಾಜಿಕ ಅರಣ್ಯ ಇಲಾಖೆ ಅಧಿಕಾರಿ ಈಶ್ವರ್, ಸಮಾಜ ಕಲ್ಯಾಣ ಇಲಾಖೆ ವ್ಯವಸ್ಥಾಪಕ ನಿರಂಜನ್‌ಮೂರ್ತಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts