More

    ಮುಖ್ಯರಸ್ತೆ ವಿಸ್ತರಣೆ ವಿಳಂಬವಾದರೆ ಹೋರಾಟ

    ಬ್ಯಾಡಗಿ: ಪಟ್ಟಣದ ಮುಖ್ಯ ರಸ್ತೆ ವಿಸ್ತರಣೆ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ. ನಿಗದಿಪಡಿಸಿದ 66 ಅಡಿ ರಸ್ತೆ ಕಾಮಗಾರಿಗೆ ಚಾಲನೆ ನೀಡಲು ಸರ್ಕಾರ ಮುಂದಾಗಬೇಕು. ವಿಸ್ತರಣೆ ವಿಳಂಬವಾದರೆ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಹೋರಾಟ ತೀವ್ರಗೊಳಿಸಲು ಶುಕ್ರವಾರ ಏರ್ಪಡಿಸಿದ್ದ ರಸ್ತೆ ವಿಸ್ತರಣೆ ಹೋರಾಟ ಸಮಿತಿ ಹಾಗೂ ಸಾರ್ವಜನಿಕರ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

    ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಮಾತನಾಡಿ, ಭೂಮಿ ಕಳೆದುಕೊಂಡವರಿಗೆ ಪರಿಹಾರ ಕೊಟ್ಟ ಬಳಿಕ ಕಾಮಗಾರಿ ಆರಂಭಿಸುವಂತೆ ಈ ಹಿಂದಿನ ಅವಧಿಯಲ್ಲಿ ಅಂಗಡಿ ಮಾಲೀಕರು ನ್ಯಾಯಾಲಯದಲ್ಲಿ ಮನವಿ ಮಾಡಿದ್ದರು. 2018ರಲ್ಲಿ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಕೇವಲ 21 ಕೋಟಿ ರೂ. ಬಿಡುಗಡೆಯಾಗಿತ್ತು. ರಸ್ತೆ ಕಾಮಗಾರಿ ಆರಂಭಿಸಲು ಪರಿಹಾರಕ್ಕೆ 15.60 ಕೋಟಿ ರೂ. ಹಾಗೂ ರಸ್ತೆ ಕಾಮಗಾರಿಗೆ 5 ಕೋಟಿ ರೂ. ಮೀಸಲಿಡಲಾಗಿತ್ತು. ಬಳಿಕ ಬೇರೆ ಬೇರೆ ಕಾರಣಗಳಿಂದ ಕಾಮಗಾರಿ ವಿಳಂಬವಾಯಿತು. ನ್ಯಾಯಾಲಯಕ್ಕೆ ಸಮರ್ಪಕ ಮಾಹಿತಿ ಸಲ್ಲಿಸುವಲ್ಲಿ ಅಧಿಕಾರಿಗಳು ವಿಳಂಬ ಮಾಡುತ್ತಿರುವುದು ಸಮಸ್ಯೆಗೆ ಮೂಲಕಾರಣ ಎನ್ನಲಾಗಿದೆ. ಇನ್ನೂ ಕಾಲ ಮಿಂಚಿಲ್ಲ. ಅಧಿಕಾರಿಗಳು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಬೇಕು ಎಂದರು.

    ರಸ್ತೆ ಅಗಲೀಕರಣ ಹೋರಾಟ ಸಮಿತಿ ಗೌರವಾಧ್ಯಕ್ಷ ಗಂಗಣ್ಣ ಎಲಿ ಮಾತನಾಡಿ, ಕಳೆದ 16 ವರ್ಷಗಳಿಂದ ರಸ್ತೆ ವಿಸ್ತರಿಸಲು ಸತತ ಹೋರಾಟ ನಡೆಸಿದ ಪರಿಣಾಮ ಎರಡು ಹಂತಗಳಲ್ಲಿ 66 ಅಡಿ ರಸ್ತೆ ನಿರ್ವಿುಸಲಾಗಿದೆ. ಆದರೆ, ಉಳಿದ 750 ಮೀಟರ್ ರಸ್ತೆ ವಿಸ್ತರಣೆಗೆ ವಿಳಂಬವಾಗುತ್ತಿದೆ. ಅಧಿಸೂಚನೆಯಂತೆ ಉಳಿದ ರಸ್ತೆ ಕಾಮಗಾರಿ ಆರಂಭಿಸಬೇಕು. ಇಲ್ಲವಾದರೆ ಸರ್ಕಾರದ ವಿರುದ್ಧ ಹೋರಾಟಕ್ಕಿಳಿಯುತ್ತೇವೆ ಎಂದು ಎಚ್ಚರಿಸಿದರು.

    ರಸ್ತೆ ಮಧ್ಯದಿಂದ ಎರಡೂ ಬದಿಗೆ 33 ಅಡಿ ರಸ್ತೆ ನಿರ್ವಿುಸಬೇಕು. ಇದಕ್ಕಿಂತ ಕಡಿಮೆಯಾದರೆ ಹೋರಾಟ ತೀವ್ರಗೊಳಿಸಲು ಸಭೆಯಲ್ಲಿ ನಿರ್ಣಯಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

    ಮಾಜಿ ಶಾಸಕ ಸುರೇಶಗೌಡ್ರ ಪಾಟೀಲ ಮಾತನಾಡಿ, ದೇಶ-ವಿದೇಶಗಳಿಂದ ಬ್ಯಾಡಗಿ ಮೆಣಸಿನಕಾಯಿ ವೀಕ್ಷಿಸಲು ಪ್ರವಾಸಿಗರು, ಅಧ್ಯಯನಕಾರರು, ಸಂಶೋಧಕರು ಆಗಮಿಸುತ್ತಿದ್ದಾರೆ. ಪ್ರತಿನಿತ್ಯ ನೂರಾರು ಬೃಹತ್ ಲಾರಿಗಳು ಮೆಣಸಿನಕಾಯಿ ಹೊತ್ತು ಓಡಾಡುತ್ತಿವೆ. ಆದರೆ, ಹೊರಗಿನವರು ರಸ್ತೆ ಪರಿಸ್ಥಿತಿ ಕಂಡು ತೀವ್ರ ಬೇಸರಪಡುತ್ತಿದ್ದಾರೆ. ಮಾಲೀಕರು ರಸ್ತೆ ಕಾಮಗಾರಿಗೆ ಸಹಕಾರ ನೀಡಬೇಕು ಎಂದರು.

    ಪುರಸಭೆ ಸದಸ್ಯ ಬಸವರಾಜ ಛತ್ರದ, ರೈತ ಮುಖಂಡ ಮಲ್ಲಿಕಾರ್ಜುನ ಬಳ್ಳಾರಿ, ಬಸವರಾಜ ಸಂಕಣ್ಣನವರ, ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್.ಎನ್. ರ್ಬಾ, ವಕೀಲರಾದ ಪ್ರಕಾಶ ಬನ್ನಿಹಟ್ಟಿ ನವೀನ ಮುಳಗುಂದ, ರಸ್ತೆ ಅಗಲೀಕರಣ ಹೋರಾಟ ಸಮಿತಿ ಅಧ್ಯಕ್ಷ ಸುರೇಶ ಛಲವಾದಿ, ಪುರಸಭೆ ಸದಸ್ಯೆ ಫಕೀರಮ್ಮ ಛಲವಾದಿ, ವಿನಯ ಹಿರೇಮಠ, ವಿನಾಯಕ ಕಂಬಳಿ, ಚಂದ್ರು ಒಳಗುಂದಿ ಬಿ.ಎಂ. ಜಗಾಪೂರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts