More

    ನಿವೇಶನ ನೀಡದಿದ್ದಲ್ಲಿ ಹೋರಾಟ

    ಚಿಕ್ಕಮಗಳೂರು: ತರೀಕೆರೆ ತಾಲೂಕು ಎಚ್.ರಂಗಾಪುರ ಗ್ರಾಮದ ಸರ್ವೇ ನಂ.14ರಲ್ಲಿ ವಾಸಿಸುತ್ತಿರುವ ನಿವೇಶನ ರಹಿತರಿಗೆ ಅದೇ ಜಾಗದಲ್ಲಿ ನಿವೇಶನ ನೀಡಬೇಕು ಹಾಗೂ ಸರ್ವೇ ನಂ.12ರ ಮಲ್ಲಯ್ಯನ ಕೆರೆಯನ್ನು ರಾಮೇಗೌಡ ಎನ್ನುವವರು ಒತ್ತುವರಿ ಮಾಡಿಕೊಂಡಿದ್ದು ಕೂಡಲೇ ತೆರವುಗೊಳಿಸಬೇಕು. ಇಲ್ಲದಿದ್ದಲ್ಲಿ ತರೀಕೆರೆ ತಹಸೀಲ್ದಾರ್ ಕಚೇರಿ ಎದುರು ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಡಿಎಸ್‌ಎಸ್ ಜಿಲ್ಲಾ ಪ್ರಧಾನ ಸಂಚಾಲಕ ಮರ್ಲೆ ಅಣ್ಣಯ್ಯ ಎಚ್ಚರಿಸಿದರು.

    ರಂಗಾಪುರದ 15 ಎಕರೆ ಸರ್ಕಾರಿ ಜಾಗದಲ್ಲಿ ನಿವೇಶನ ರಹಿತ ದಲಿತರು ಗುಡಿಸಲು ನಿರ್ಮಿಸಿಕೊಂಡು ಜೀವನ ನಡೆಸುತ್ತಿದ್ದರು. ಆದರೆ ಕೆಲ ಭೂಗಳ್ಳರು ಗುಡಿಸಲುಗಳನ್ನು ಕಿತ್ತು ಸುಟ್ಟುಹಾಕಿದ್ದಾರೆ. ಈ ಮೂಲಕ ಬಡವರಿಗೆ ಜೀವ ಬೆದರಿಕೆ ಒಡ್ಡಲಾಗಿದೆ. ಕೂಡಲೇ ನಿವೇಶನ ರಹಿತರಿಗೆ ನ್ಯಾಯ ಒದಗಿಸಲು ತಾಲೂಕು ಆಡಳಿತ ಕ್ರಮ ಕೈಗೊಳ್ಳಬೇಕು. ಇಲ್ಲದ್ದಲ್ಲಿ ಹೋರಾಟ ನಡೆಸುವುದು ಅನಿವಾರ್ಯ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
    ಎಂ.ಸಿ.ಹಳ್ಳಿ ಎಚ್.ರಂಗಾಪುರ ಗ್ರಾಮದ ಮಲ್ಲಯ್ಯನ ಕೆರೆಯನ್ನು ಸ್ಥಳೀಯ ಗ್ರಾಪಂ ಅಧ್ಯಕ್ಷ ಎನ್.ರಾಮೇಗೌಡ ಎಂಬುವರು ಒತ್ತುವರಿ ಮಾಡಿದ್ದಾರೆ. ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ದಾಖಲೆಗಳೊಂದಿಗೆ ದೂರು ನೀಡಿದರೂ ತಹಸೀಲ್ದಾರರು ರಾಜಕೀಯ ಒತ್ತಡಕ್ಕೆ ಮಣಿದು ಒತ್ತುವರಿ ತೆರವುಗೊಳಿಸುತ್ತಿಲ್ಲ. ವಾರದೊಳಗೆ ತೆರವುಗೊಳಿಸದಿದ್ದಲ್ಲಿ ತಾಲೂಕು ಕಚೇರಿ ಎದುರು ಅಹೋರಾತ್ರಿ ಧರಣಿ ನಡೆಸುವುದಾಗಿ ತಿಳಿಸಿದರು.
    ಡಿಎಸ್‌ಎಸ್ ಮುಖಂಡರಾದ ಎಂ.ಸಿ.ಹಳ್ಳಿ ರಘು, ರಮೇಶ್, ವಿಕಾಸ್, ಸಂತೋಷ್ ಲಕ್ಯಾ, ರಮೇಶ್ ಉದ್ದೇಬೋರನಹಳ್ಳಿ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts