ಬೆಳೆಗೆ ನೈಜ ಬೆಲೆ ನೀಡದಿದ್ದಲ್ಲಿ ಹೋರಾಟ

raitharedege
ರೈತರೆಡೆಗೆ ನಮ್ಮ ನಡಿಗೆ 40ನೇ ಮಾಲಿಕೆಯಲ್ಲಿ ಕೋಟತಟ್ಟು ಚೆಚ್ಕೆರೆ ಚಂದ್ರಶೇಖರ್ ಗಾಣಿಗ ಅವರಿಗೆ ಕೃಷಿ ಪರಿಕರ ನೀಡಿ ಗೌರವಿಸಲಾಯಿತು.
Published on

ಕೋಟ: ರೈತ ಕಾಯಕವೇ ಕ್ಲಿಷ್ಟಕರವಾದದ್ದು ಅದರಲ್ಲಿ ಅಳಿದುಳಿದ ರೈತರು ಕೃಷಿಕಾಯಕದಲ್ಲಿ ನಿರತರಾಗಿದ್ದಾರೆ. ಆದರೆ ಬೆಳೆದ ಬೆಳೆಯ ಲಾಭ ಮಧ್ಯವರ್ತಿಗಳಿಗಾಗುತ್ತಿದೆ. ಪ್ರಸ್ತುತ ಭತ್ತದ ಬೆಳೆಗೆ ನೈಜ ಬೆಲೆ ಸಿಗದಿದ್ದರೆ ರೈತ ಸಮುದಾಯ ಹೋರಾಟಕ್ಕೆ ಧುಮುಕಲಿದೆ ಎಂದು ಕೋಟದ ರೈತಧ್ವನಿ ಸಂಘ ಅಧ್ಯಕ್ಷ ಎಂ.ಜಯರಾಮ ಶೆಟ್ಟಿ ಹೇಳಿದರು.

ಕೋಟದ ಪಂಚವರ್ಣ ಯುವಕ ಮಂಡಲ, ಮಹಿಳಾ ಮಂಡಲ ಕೋಟ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಗೆಳೆಯರ ಬಳಗ ಕಾರ್ಕಡ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ರೈತಧ್ವನಿ ಸಂಘ ಕೋಟ, ವಿಪ್ರ ಮಹಿಳಾ ವಲಯ ಸಾಲಿಗ್ರಾಮ, ಜೆಸಿಐ ಸಿನಿಯರ್ ಲಿಜನ್ ಸಹಯೋಗದೊಂದಿಗೆ ರೈತರೆಡೆಗೆ ನಮ್ಮ ನಡಿಗೆ 40ನೇ ಮಾಲಿಕೆಯಲ್ಲಿ ಮಾತನಾಡಿದರು.

ಪಂಚವರ್ಣ ಯುವಕ ಮಂಡಲ ಅಧ್ಯಕ್ಷ ಅಜಿತ್ ಆಚಾರ್ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಉಡುಪಿ ಜಿಲ್ಲಾ ಸಂಯೋಜಕ ರವೀಂದ್ರ ಮೊಗವೀರ ವಿಮಾ ಯೋಜನೆ ಬಗ್ಗೆ ಮಾಹಿತಿ ನೀಡಿದರು.

ಕೋಟತಟ್ಟು ಚೆಚ್ಕೆರೆ ಚಂದ್ರಶೇಖರ್ ಗಾಣಿಗ ಅವರಿಗೆ ಕೃಷಿ ಪರಿಕರ ನೀಡಿ ಗೌರವಿಸಲಾಯಿತು. ಕುಂದಾಪುರ ನ್ಯಾಯಾಲಯದ ವಕೀಲ ಕೋಟತಟ್ಟು ಪ್ರಮೋದ್ ಹಂದೆ, ಮುಖ್ಯ ಅಭ್ಯಾಗತರಾಗಿ ಕೋಟ ಸಹಕಾರಿ ವ್ಯವಸಾಯಕ ಸಂಘದ ಸಿಇಒ ಶರತ್ ಕುಮಾರ್ ಶೆಟ್ಟಿ, ಕೋಟತಟ್ಟು ಗ್ರಾಪಂ ಸದಸ್ಯ ವಾಸು ಪೂಜಾರಿ, ಗ್ರಾಮದ ಹಿರಿಯರಾದ ವೈಕುಂಠ ಹಂದೆ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಅಧ್ಯಕ್ಷ ಜಿ.ತಿಮ್ಮ ಪೂಜಾರಿ, ಜೆಸಿಐ ಸಿನಿಯರ್ ಲಿಜನ್ ಕೋಟ ಅಧ್ಯಕ್ಷ ಕೇಶವ ಆಚಾರ್ ಕೋಟ, ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಪಂಚವರ್ಣ ಸಂಸ್ಥೆಯ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ ಮತ್ತಿತರರು ಉಪಸ್ಥಿತರಿದ್ದರು. ಪಂಚವರ್ಣ ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ಸ್ವಾಗತಿಸಿದರು.

ಜತೆ ಕಾರ್ಯದರ್ಶಿ ಶಕೀಲ ಎನ್.ಪೂಜಾರಿ ಸನ್ಮಾನ ಪತ್ರವಾಚಿಸಿದರು. ಪಂಚವರ್ಣದ ಸದಸ್ಯ ಸಂತೋಷ್ ಕುಮಾರ್ ಕೋಟ ನಿರೂಪಿಸಿದರು. ಸಾಂಸ್ಕೃತಿಕ ಕಾರ್ಯದರ್ಶಿ ಶಶಿಧರ ತಿಂಗಳಾಯ ವಂದಿಸಿದರು. ಕಾರ್ಯಾಧ್ಯಕ್ಷ ರವೀಂದ್ರ ಕೋಟ ಸಂಯೋಜಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net