More

    ಐಸಿಸಿ ಟೆಸ್ಟ್ ರ‌್ಯಾಂಕಿಂಗ್‌ನಲ್ಲಿ 3ನೇ ಸ್ಥಾನಕ್ಕೆ ಜಿಗಿದ ಸ್ಟುವರ್ಟ್ ಬ್ರಾಡ್

    ದುಬೈ: ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಸರಣಿ ಗೆಲುವಿನ ಪ್ರಮುಖ ಪಾತ್ರವಹಿಸಿದ ಇಂಗ್ಲೆಂಡ್ ವೇಳೆ ಸ್ಟುವರ್ಟ್ ಬ್ರಾಡ್, ಐಸಿಸಿ ಟೆಸ್ಟ್ ರ‌್ಯಾಂಕಿಂಗ್‌ನಲ್ಲಿ 7 ಸ್ಥಾನ ಜಿಗಿತ ಕಂಡು 3ನೇ ಸ್ಥಾನ ಪಡೆದಿದ್ದಾರೆ. ಮಂಗಳವಾರ ಮ್ಯಾಂಚೆಸ್ಟರ್‌ನಲ್ಲಿ ಮುಕ್ತಾಯಗೊಂಡ 3ನೇ ಹಾಗೂ ಅಂತಿಮ ಟೆಸ್ಟ್‌ನಲ್ಲಿ ಇಂಗ್ಲೆಂಡ್ 269 ರನ್‌ಗಳಿಂದ ವಿಂಡೀಸ್ ತಂಡವನ್ನು ಮಣಿಸಿ, 2-1 ರಿಂದ ಸರಣಿ ಗೆದ್ದುಕೊಂಡಿತು. ಬ್ರಾಡ್ ಪಂದ್ಯದಲ್ಲಿ 67 ರನ್‌ಗಳಿಗೆ 10 ವಿಕೆಟ್ ಕಬಳಿಸಿದ್ದರು. ಜತೆಗೆ ಟೆಸ್ಟ್ ಕ್ರಿಕೆಟ್‌ನಲ್ಲಿ 500 ವಿಕೆಟ್ ಕಿತ್ತ ಸಾಧನೆ ಮಾಡಿದ್ದರು. 2016ರ ಆಗಸ್ಟ್ ತಿಂಗಳ ಬಳಿಕ ಮೊದಲ ಬಾರಿಗೆ ಬ್ರಾಡ್ ಶ್ರೇಷ್ಠ ಸಾಧನೆ ಮಾಡಿದ್ದಾರೆ. ಬ್ಯಾಟಿಂಗ್‌ನಲ್ಲಿ ಕೇವಲ 45 ಎಸೆತಗಳಲ್ಲಿ 62 ರನ್ ಸಿಡಿಸಿದ್ದ ಬ್ರಾಡ್, ಆಲ್ರೌಂಡರ್ ವಿಭಾಗದಲ್ಲೂ 11ನೇ ಸ್ಥಾನಕ್ಕೇರಿದ್ದಾರೆ. ಕೋವಿಡ್-19 ಮಹಾಮಾರಿಯಿಂದಾಗಿ ಭಾರತೀಯ ಕ್ರಿಕೆಟಿಗರು ಕಳೆದ ಮಾರ್ಚ್ ತಿಂಗಳಿಂದ ಕ್ರಿಕೆಟ್ ಮೈದಾನದಿಂದ ಹೊರಗುಳಿದಿದ್ದಾರೆ. ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ವಿಭಾಗದಲ್ಲಿ 2ನೇ ಸ್ಥಾನ ಕಾಯ್ದುಕೊಂಡರೆ, ಚೇತೇಶ್ವರ್ ಪೂಜಾರ ಹಾಗೂ ಅಜಿಂಕ್ಯ ರಹಾನೆ ಕ್ರಮವಾಗಿ 7ನೇ ಹಾಗೂ 9ನೇ ಸ್ಥಾನದಲ್ಲಿದ್ದಾರೆ. ಆಲ್ರೌಂಡರ್ ವಿಭಾಗದಲ್ಲಿ ರವೀಂದ್ರ ಜಡೇಜಾ ಹಾಗೂ ಆರ್.ಅಶ್ವಿನ್, 3 ಹಾಗೂ 5ನೇ ಸ್ಥಾನದಲ್ಲಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts