25.9 C
Bengaluru
Wednesday, January 22, 2020

ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳ ಸಾಧನೆ

Latest News

ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಲ್ಲ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟಿದ್ದ ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಕೆ ನೀಡಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ...

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ನಾಗಮಂಗಲ: ತಾಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಬಿಜಿಎಸ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ನ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಚಿಕ್ಕಬಳ್ಳಾಪುರ, ಪ್ರೌಢಶಾಲಾ ವಿಭಾಗದಲ್ಲಿ ಶಿವಮೊಗ್ಗ ಹಾಗೂ ಪಿಯು ಕಾಲೇಜು ವಿಭಾಗದಲ್ಲಿ ನಾಗಮಂಗಲ ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.

ರಾಜ್ಯದ 15 ಜಿಲ್ಲೆಗಳಿಂದ ಒಟ್ಟು 3200 ಕ್ರೀಡಾಪಟುಗಳು ಭಾಗವಹಿಸಿದ್ದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಕಂದಾಯ ಸಚಿವ ಆರ್.ಅಶೋಕ್ ಚಾಲನೆ ನೀಡಿದ್ದರು. ಶ್ರೀಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿಗಳ ಸಾನಿಧ್ಯದಲ್ಲಿ ವಹಿಸಿದ್ದರು.
ಹಿರಿಯ ಪ್ರಾಥಮಿಕ ಶಾಲೆಯ ಬಾಲಕರ ವಿಭಾಗದಲ್ಲಿ ಶಿವಮೊಗ್ಗ 26 ಅಂಕಗಳೊಂದಿಗೆ ಪ್ರಥಮ ಸ್ಥಾನ, ಬಾಲಕಿಯರ ವಿಭಾಗದಲ್ಲಿ ಚಿಕ್ಕಬಳ್ಳಾಪುರ 23 ಅಂಕ ಪಡೆದು ಪ್ರಥಮ ಸ್ಥಾನ ಪಡೆಯಿತು.

ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ಶಿವಮೊಗ್ಗ 67 ಅಂಕಗಳೊಂದಿಗೆ ಪ್ರಥಮ ಸ್ಥಾನ, ಬಾಲಕಿಯರ ವಿಭಾಗದಲ್ಲಿ ಶಿವಮೊಗ್ಗ 40 ಅಂಕ ಪಡೆದು ಪ್ರಥಮ ಸ್ಥಾನಗಳಿಸಿತು.

ಪಿಯು ಕಾಲೇಜು ಬಾಲಕರ ವಿಭಾಗದಲ್ಲಿ 53 ಅಂಕ ಹಾಗೂ ಬಾಲಕಿಯರ ವಿಭಾಗದಲ್ಲಿ 28 ಅಂಕಗಳೊಂದಿಗೆ ನಾಗಮಂಗಲ ಪಿಯು ಕಾಲೇಜು ಪ್ರಥಮ ಸ್ಥಾನ ಪಡೆಯಿತು. ವಿಜೇತ ತಂಡಗಳಿಗೆ ಪ್ರಶಸ್ತಿ ಹಾಗೂ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.

ಕ್ರೀಡಾಕೂಟದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಎಸ್.ಆರ್.ವಿಶ್ವನಾಥ್, ಒಲಂಪಿಕ್‌ನಲ್ಲಿ ಪದಕಗಳಿಸುವಲ್ಲಿ ಭಾರತ ವಿಫಲವಾಗಿದೆ. ಇದಕ್ಕೆ ಕಾರಣ ಕ್ರೀಡಾಪಟುಗಳಿಗೆ ಪ್ರೋತ್ಸಾಹ ದೊರಕದಿರುವುದು ಹಾಗೂ ಕ್ರೀಡಾಪಟುಗಳಲ್ಲಿ ಕಠಿಣ ಶ್ರಮ ಇಲ್ಲದಿರುವುದು ಎಂದರು.

ಕಠಿಣ ಪರಿಶ್ರಮದಿಂದ ಮಾತ್ರ ಗುರಿ ಮುಟ್ಟಲು ಸಾಧ್ಯ. ಇಂದಿನ ಯುವ ಶಕ್ತಿ ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ದೇಶಕ್ಕೆ ಗೌರವ ತಂದುಕೊಡಬೇಕು ಎಂದು ಸಲಹೆ ನೀಡಿದರು.

ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಕ್ರೀಡೆಗೆ ಉತ್ತಮ ಪ್ರೋತ್ಸಾಹ ನೀಡುತ್ತಿದೆ. ಧಾರ್ಮಿಕತೆಯ ಅರಿವಿನ ಜತೆಗೆ ಉತ್ತಮ ಸಂಸ್ಕಾರ ಮತ್ತು ಸಂಸ್ಕತಿಯನ್ನು ಯುವ ಸಮುದಾಯಕ್ಕೆ ನೀಡುತ್ತಿದೆ. ಆ ಮೂಲಕ ಶ್ರೀಗಳು ಸಾಮಾಜಿಕ ಕಾರ್ಯ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.

ಸಮಾರಂಭದ ಸಾನ್ನಿಧ್ಯವನ್ನು ಡಾ.ನಿರ್ಮಲಾನಂದನಾಥ ಸ್ವಾಮೀಜಿ ವಹಿಸಿದ್ದರು. ಶ್ರೀ ಮಠದ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ, ಹಾಸನ ಶಾಖಾ ಮಠದ ಶ್ರೀ ಶಂಭೂನಾಥ ಸ್ವಾಮೀಜಿ, ಚಿಕ್ಕಬಳ್ಳಾಪುರ ಶಾಖಾ ಮಠದ ಶ್ರೀ ಮಂಗಳನಾಥ ಸ್ವಾಮೀಜಿ, ಚಿಕ್ಕಮಗಳೂರು ಶಾಖಾ ಮಠದ ಶ್ರೀ ಗುಣನಾಥ ಸ್ವಾಮೀಜಿ, ಬಿಜೆಪಿ ರಾಜ್ಯ ವಕ್ತಾರ ಆನಂದ್, ತಮಿಳುನಾಡಿನ ಆರ್.ವೆಲ್ಲಾಂಗಿನಿ, ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಡಾ.ಎ.ಟಿ.ಶಿವರಾಮು, ಮುಖಂಡರಾದ ರಾಮಲಿಂಗಯ್ಯ, ಲಿಂಗೇಶ್ ಸೇರಿದಂತೆ ಹಲವರು ಹಾಜರಿದ್ದರು.

2020ರ ಕ್ರೀಡಾಕೂಟ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆಯಲಿದ್ದು, ಅಲ್ಲಿನ ಶಾಖಾ ಮಠದ ಶ್ರೀ ಗುಣನಾಥ ಸ್ವಾಮೀಜಿಗೆ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಧ್ವಜವನ್ನು ಹಸ್ತಾಂತರ ಮಾಡಿದರು. 2021ರ ಕ್ರೀಡಾಕೂಟ ರಜತ ಮಹೋತ್ಸವದ ಕ್ರೀಡಾಕೂಟ ವಾಗಿದ್ದು ಶಿವಮೊಗ್ಗ ಶಾಖಾ ಮಠದ ಶ್ರೀ ಪ್ರಸನ್ನನಾಥ ಸ್ವಾಮೀಜಿ ನಡೆಸಿಕೊಡಲಿದ್ದಾರೆ.

ಮಾನವ ಸಂಪನ್ಮೂಲ ದೇಶದ ಅತೀ ದೊಡ್ಡ ಸಂಪತ್ತು. ಮಾನವ ಸಂಪನ್ಮೂಲ ಚೆನ್ನಾಗಿದ್ದರೆ ದುಡಿಮೆ ಜತೆಗೆ ಕ್ರೀಡೆಯಲ್ಲೂ ಸಾಧನೆ ಮಾಡಬಹುದು. ಇದರಿಂದ ಉತ್ತಮ ಬದುಕುಕಟ್ಟಿಕೊಳ್ಳಬಹುದು.
ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಪೀಠಾಧ್ಯಕ್ಷರು, ಆದಿಚುಂಚನಗಿರಿ ಮಹಾಸಂಸ್ಥಾನ ಮಠ.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...