ಮಂಗಳೂರು: ಕಳೆದ ಕೆಲ ವರ್ಷಗಳ ರಾಜ್ಯಾದ್ಯಂತ ತೀವ್ರ ಸದ್ದು ಮಾಡಿದ ನೈತಿಕ ಪೊಲೀಸ್ಗಿರಿಯ ಘಟನೆಯೊಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.
ಹುಡುಗಿಯೊಂದಿಗೆ ಮಾತನಾಡಿದ ಎಂಬ ಕಾರಣಕ್ಕೆ ಬಲಪಂಥೀಯ ಸಂಘಟನೆಯ ಸದಸ್ಯರು ವಿದ್ಯಾರ್ಥಿಯನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಮಾತನಾಡಿಸಿದ್ದಕ್ಕೆ ಹಲ್ಲೆ
ಪುತ್ತುರು ಹೊರವಲಯದ ಕೆಮ್ಮಿಂಜೆ ನಿವಾಸಿ ಮೊಹಮ್ಮದ್ ಪರೀಸ್ ಹಲ್ಲೆಗೊಳಗಾದ ವಿದ್ಯಾರ್ಥಿ ಎಂದು ತಿಳಿದು ಬಂದಿದ್ದು ಕಬಕ ಸರ್ಕಾರಿ ಕಾಲೇಜಿನಲ್ಲಿ ಪ್ರಥಮ ಪಿಯು ವ್ಯಾಸಂಗ ಮಾಡುತ್ತಿದ್ದರು.
ಇದನ್ನೂ ಓದಿ: VIDEO| ನದಿಗೆ ಅಡ್ಡಲಾಗಿ ನಿರ್ಮಿಸಿದ ಸೇತುವೆ ಕುಸಿತ!
ಪುತ್ತೂರಿನ ಬಸ್ ನಿಲ್ದಾಣದ ಬಳಿ ಇರುವ ಲಸ್ಸಿ ಶಾಪಿನಲ್ಲಿ ಸಹಪಾಠಿಗಳೊಂದಿಗೆ ಜ್ಯೂಸ್ ಕುಡಿಯುತ್ತಿದ್ದ ವೇಳೆ ಆಟೋದಲ್ಲಿ ಬಂದ ದುಷ್ಕರ್ಮಿಗಳು ವಿದ್ಯಾರ್ಥಿಯ ಜೊತೆ ತೆಗೆಳಿದ್ದಾರೆ. ಇದನ್ನು ಪ್ರಶ್ನಿಸಿದ ವಿದ್ಯಾರ್ಥಿಗೆ ಅನ್ಯ ಕೋಮಿನ ವಿದ್ಯಾರ್ಥಿನಿಯರೊಂದಿಗೆ ಜ್ಯೂಸ್ ಕುಡಿಯುತ್ತಿದ್ದೀಯಾ ಎಂದು ಹೇಳಿ ದೊಣ್ಣೆ ಹಾಗೂ ವೈರಿನಿಂದ ಹಲ್ಲೆ ನಡೆಸಿದ್ದಾರೆ.
ಆರೋಪಿಗಳ ಬಂಧನ
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ವಿದ್ಯಾರ್ಥಿಯನ್ನು ರಕ್ಷಿಸಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.
ವಿದ್ಯಾರ್ಥಿಯ ಹೇಳಿಕೆಯನ್ನು ದಾಖಲಿಸಿಕೊಂಡ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದು ಆರೋಪಿಗಳನ್ನು ಬಂಧಿಸಿ ಅವರ ವಿರುದ್ಧ ಭಅರತ ದಂಡ ಸಂಹಿತೆ(IPC Section) 143, 147, 148,324, 365, 504, 506 ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.