More

    ಶಾಲಾ ಕಾಲೇಜಿನಲ್ಲಿ ಹಬ್ಬದ ವಾತಾವರಣ

    ಚಿಕ್ಕಮಗಳೂರು: ಸುದೀರ್ಘ ಅವಧಿ ನಂತರ ಪ್ರೌಢಶಾಲೆ ಮತ್ತು ಪಿಯುಸಿ ವಿದ್ಯಾರ್ಥಿಗಳು ಆನ್​ಲೈನ್ ತರಗತಿಯಿಂದ ಆಫ್​ಲೈನ್ ತರಗತಿಗೆ ಮರಳಿದರು. ಹೊಸ ವರ್ಷ ಆರಂಭದ ದಿನದಂದು ಉತ್ಸಾಹದಿಂದ ತರಗತಿಗಳಲ್ಲಿ ಪಾಠ ಕೇಳಿದರು.

    ಸರ್ಕಾರದ ನಿರ್ಧಾರಕ್ಕೆ ವಿದ್ಯಾರ್ಥಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಪಾಲಕರು ಸಾಥ್ ನೀಡಿದ್ದಾರೆ. ಶಾಲಾ ಕಾಲೇಜುಗಳಲ್ಲಿ ವಹಿಸಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳು, ಶಿಕ್ಷಕರು, ಉಪನ್ಯಾಸಕರಿಗೆ ಶಿಕ್ಷಣ ಇಲಾಖೆ ಸಲಹೆ, ಸೂಚನೆ ನೀಡಿದ ಹಿನ್ನೆಲೆ ಎಲ್ಲೆಡೆ ಮುನ್ನೆಚ್ಚರಿಕೆ ವಹಿಸಲಾಗಿತ್ತು.

    ನಗರದಲ್ಲಿ ಕೆಲ ವಿದ್ಯಾರ್ಥಿಗಳು ಬೆಳಗ್ಗೆಯೆ ದೇವಾಲಯಗಳಲ್ಲಿ ಪ್ರಾರ್ಥನೆ ಬಳಿಕ ಶಾಲಾ ಕಾಲೇಜುಗಳಿಗೆ ತೆರಳಿದರು. ಮುಖ್ಯ ದ್ವಾರದಲ್ಲೇ ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಸರ್ ಸಿಂಪಡಣೆ , ಮಾಸ್ಕ್ ಧರಿಸಿರುವುದನ್ನು ಗಮನಿಸಿ ಜತೆಗೆ ಪಾಲಕರ ಒಪ್ಪಿಗೆ ಪತ್ರವನ್ನು ಪರಿಗಣಿಸಿ ಕೊಠಡಿಗೆ ಪ್ರವೇಶ ನೀಡಲಾಗುತ್ತಿತ್ತು. ಬಹಳಷ್ಟು ವಿದ್ಯಾರ್ಥಿಗಳನ್ನು ಪಾಲಕರೇ ಶಾಲೆಗೆ ಬಂದು ಬಿಟ್ಟುಹೋದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts