ಕಾಸರಗೋಡು: ನೃತ್ಯಾಭ್ಯಾಸದಲ್ಲಿ ತೊಡಗಿದ್ದ ವಿದ್ಯಾರ್ಥಿನಿ ಹಠಾತ್ ಕುಸಿದು ಬಿದ್ದು ಮೃತಪಟ್ಟ ಘಟನೆ ಪಳ್ಳಿಕೆರೆಯಲ್ಲಿ ನಡೆದಿದೆ. ಇಲ್ಲಿನ ತೊಟ್ಟಿ ಕಿಳಕ್ಕೇಕರ ನಿವಾಸಿ ರವೀಂದ್ರನ್ ಎಂಬವರ ಪುತ್ರಿ ಶ್ರೀನಂದಾ(13)ಮೃತಪಟ್ಟ ಬಾಲಕಿ.
ಪಾಕ್ಯಾರ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿಯಾಗಿದ್ದರು. ಭಾನುವಾರ ರಾತ್ರಿ ನೃತ್ಯಾಭ್ಯಾಸದಲ್ಲಿ ತೊಡಗಿದ್ದ ಶ್ರೀನಂದಾ ಕುಸಿದು ಬಿದ್ದಿದ್ದರು. ತಕ್ಷಣ ಈಕೆಯನ್ನು ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜನವಾಗಿರಲಿಲ್ಲ.