

ಕಾರ್ಕಳ: ನಿಟ್ಟೆಯಲ್ಲಿ ಬುಧವಾರ ಬೆಳಗ್ಗೆ ಬಸ್‌ನಿಂದ ಬಿದ್ದು ಕಾಲೇಜು ವಿದ್ಯಾರ್ಥಿ, ಮಾಳ ಗ್ರಾಮದ ಹುಕ್ರಟ್ಟೆ ನಿವಾಸಿ ಜನಿತ್ ಶೆಟ್ಟಿ(19) ಮೃತ ಮೃತಪಟ್ಟಿದ್ದಾರೆ.
ನಿಟ್ಟೆ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ವರ್ಷದ ಬಿಎಸ್ಸಿ ವಿದ್ಯಾರ್ಥಿಯಾಗಿದ್ದು, ಬುಧವಾರ ಬೆಳಗ್ಗೆ ಕಾರ್ಕಳದಿಂದ ಮಂಗಳೂರಿಗೆ ಹೋಗುವ ಖಾಸಗಿ ಬಸ್‌ನಲ್ಲಿ ಕಾಲೇಜಿಗೆ ಹೋಗುತ್ತಿದ್ದ ಸಂದರ್ಭ ಚಲಿಸುತ್ತಿದ್ದ ಬಸ್‌ನಿಂದ ಕೆಳಗೆ ಬಿದ್ದ ಪರಿಣಾಮ ವಿದ್ಯಾರ್ಥಿಯ ಮೈಮೇಲೆ ಬಸ್ ಹಿಂಬದಿಯ ಚಕ್ರ ಹರಿದಿದೆ. ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ನಡೆಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಜನಿತ್ ಶೆಟ್ಟಿ ಮೃತಪಟ್ಟಿದ್ದಾರೆ. ಅವರು ತಾಯಿ, ತಂಗಿಯನ್ನು ಅಗಲಿದ್ದಾರೆ.