More

    ವಿದ್ಯಾರ್ಥಿಗಳ ಕನಸು ದೇಶಾಭಿವೃದ್ಧಿಗೆ ಪೂರಕವಾಗಿರಲಿ, ರಾಯಚೂರು ವಿವಿ ಕುಲಪತಿ ಪ್ರೊ.ಹರೀಶ ರಾಮಸ್ವಾಮಿ ಆಶಯ

    ರಾಯಚೂರು: ಹೊಸ ಶಿಕ್ಷಣ ನೀತಿಯಲ್ಲಿ ಭಾರತೀಯ ಮೌಲ್ಯಗಳನ್ನು ಸೇರಿಸಲು ನಾವೆಲ್ಲರೂ ಪ್ರಯತ್ನಿಸಬೇಕಾಗಿದೆ. ದೇಶದ ಸಂಸ್ಕೃತಿ, ಪರಂಪರೆ, ಇತಿಹಾಸ, ಪ್ರಗತಿಯ ಬಗ್ಗೆ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಶಿಕ್ಷಣದಿಂದಲೇ ತಿಳಿಸುವಂತಾಗಬೇಕು ಎಂದು ರಾಯಚೂರು ವಿವಿ ಕುಲಪತಿ ಪ್ರೊ.ಹರೀಶ ರಾಮಸ್ವಾಮಿ ಹೇಳಿದರು.

    ನಗರದ ಹೊರವಲಯದಲ್ಲಿರುವ ವಿವಿಯ ಸಭಾಂಗಣದಲ್ಲಿ ಸ್ವಾತಂತ್ರೋತ್ಸವ ಅಮೃತ ಮಹೋತ್ಸವ ನಿಮಿತ್ತ ಶನಿವಾರ ಏರ್ಪಡಿಸಿದ್ದ ವಿವಿ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ವಿದ್ಯಾರ್ಥಿಗಳ ಕನಸು, ಆಸಕ್ತಿ, ಪರಿಶ್ರಮ ದೇಶದ ವಿಕಾಸಕ್ಕೆ ಪೂರಕವಾಗಿರಬೇಕು. ಅಂತಹ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಕೆಲಸವನ್ನು ವಿವಿ ಮಾಡಲು ಸಿದ್ಧವಿದೆ ಎಂದರು.

    ವಿವಿಯ ವಿದ್ಯಾ ವಿಷಯಕ ಪರಿಷತ್ ಸದಸ್ಯ ಮಲ್ಲಿಕಾರ್ಜುನ ಹಳ್ಳೂರು ಮಾತನಾಡಿ, ಶಿಕ್ಷಣದ ಮೌಲ್ಯಗಳು ಮತ್ತು ಮಾನವೀಯತೆ ಕಳೆದು ಹೋಗುತ್ತಿವೆ. ಮೌಢ್ಯತೆ, ಅಜ್ಞಾನ ಹೆಚ್ಚಾಗುತ್ತಿದ್ದು, ಸಂಸ್ಕಾರವನ್ನು ಬಿಡದೆ ನೈತಿಕ ಮೌಲ್ಯಗಳನ್ನು ಕಾಪಾಡಿಕೊಂಡು ಹೋಗಬೇಕಾದ ಜವಾಬ್ದಾರಿ ವಿದ್ಯಾರ್ಥಿಗಳದ್ದಾಗಿದೆ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts