

ಮಂಗಳೂರು: ಬೈಕ್ ಸ್ಕಿಡ್ ಆಗಿ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ 21 ವರ್ಷದ ವಿದ್ಯಾರ್ಥಿಯೋರ್ವ ಸಾವನ್ನಪ್ಪಿರುವ ದಾರುಣ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮೃತನನ್ನು ಮಹಮ್ಮದ್ ನಿಶಾತ್ ಎಂದು ಗುರುತಿಸಲಾಗಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದ. ಈ ಘಟನೆಯು ಬುಧವಾರದಂದು ಅಡ್ಯಾರ್‌ನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜ್ ಬಳಿ ನಡೆದಿದೆ. ಅಪಘಾತದ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ದುರಂತ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೇಗವಾಗಿ ಬಂದ ವಾಹನವು ಸ್ಕಿಡ್ ಆಗಿ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯು ಗಾಳಿಯಲ್ಲಿ ಹಾರಿ ಕೆಳಗಿ ಬಿದ್ದಿರುವುದು ದೃಶ್ಯದಲ್ಲಿ ಕಂಡು ಬಂದಿದೆ.
ಅಪಘಾತವಾದ ತಕ್ಷಣವೇ ಟ್ರಾಫಿಕ್ ಪೊಲೀಸ್ ಇನ್ಸ್‌ಪೆಕ್ಟರ್ ಮತ್ತು ಸ್ಥಳದಲ್ಲಿದ್ದ ಜನರು ಆತನಿಗೆ ನೆರವನ್ನು ನೀಡಲು ಘಟನಾ ಸ್ಥಳಕ್ಕೆ ಧಾವಿಸಿದರೂ ಸಹ, ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. (ಏಜೆನ್ಸೀಸ್)