ಚಲಿಸುತ್ತಿರುವ ಬಸ್​ನಿಂದ ಕೆಳಗೆ ಬಿದ್ದ ವಿದ್ಯಾರ್ಥಿನಿ; ಪ್ರಾಣಾಪಾಯದಿಂದ ಪಾರು

Bus Accident
Published on

ಚಿಕ್ಕಬಳ್ಳಾಪುರ: ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್​ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾದ ಶಕ್ತಿ ಯೋಜನೆಗೆ ರಾಜ್ಯಾದ್ಯಂತ ಮಹಿಳೆಯರಿಂದ ಭರ್ಜರಿ ರೆಸ್ಪಾನ್ಸ್​ ದೊರೆತ್ತಿದ್ದು, ಬಸ್​ನಲ್ಲಿ ಪ್ರಯಾಣಿಸಲು ನೂಕುನುಗ್ಗಲು ಉಂಟಾಗುತ್ತಿದೆ.

ಯೋಜನೆಗೆ ಚಾಲನೆ ನೀಡಿ ತಿಂಗಳು ಕಳೆಯುತ್ತಾ ಬಂದರೂ ಬಸ್​ನಲ್ಲಿ ಪ್ರಯಾಣಿಸುವ ಮಹಿಳೆಯರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕೆಲವೆಡೆ ಮಹಿಳೆಯರು ಬಸ್​ ಹತ್ತುವಾಗ ಡೋರ್​, ಕಿಟಕಿಯ ಸರಳುಗಳು ಕಿತ್ತುಕೊಂಡು ಬಂದಿರುವ ಫೋಟೋ ಹಾಗು ವಿಡಿಯೋವನ್ನು ನಾವು ನೋಡಿದ್ದೇವೆ. 

ಇದೀಗ ಘಟನೆ ಒಂದರಲ್ಲಿ ವಿದ್ಯಾರ್ಥಿನಿ ಓರ್ವಳು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಜಾತವಾರಹೊಸಹಳ್ಳಿಯಲ್ಲಿ ನಡೆದಿದೆ.

Bus Accident

ಚಿಕ್ಕಬಳ್ಳಾಪುರ-ಶಿಡ್ಲಘಟ್ಟ ನಡುವೆ ಸಂಚರಿಸುವ ಬಸ್​ನಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಈ ವೇಳೆ ವಿದ್ಯಾರ್ಥಿನಿ ಬಸ್​ ಫುಟ್​ಬೋರ್ಡ್​ ಏರಿದ್ದು, ಚಲಿಸುತ್ತಿರುವಾಗಲ್ಲೇ ನಿಲ್ಲಲು ಸಾಧ್ಯವಾಗದೆ ಕೆಳಗೆ ಬಿದ್ದಿದ್ದಾಳೆ. ಕೂಡಲೇ ಎಚ್ಚತ್ತೆ ವಿದ್ಯಾರ್ಥಿನಿ ಮೇಲೆದ್ದು ನಿಂತಿದ್ದಾಳೆ. ಇಲ್ಲವಾದ್ದಲ್ಲಿ ಅಕೆಯ ತಲೆ ಚಕ್ರದ ಅಡಿ ಸಿಲುಕಿ ಮೃತಪಡುತ್ತಿದ್ದಳು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಸಾರಿಗೆ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ. ವಿದ್ಯಾರ್ಥಿಗಳ ಹಿತದೃಷ್ಇಯಿಂದ ಸಮರ್ಪಕ ಬಸ್​ ಸೌಲಭ್ಯ ಒದಗಿಸುವಂತೆ ಆಗ್ರಹಗಳು ಕೇಳಿ ಬರುತ್ತಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net