ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣಕ್ಕೆ ಸಾಥ್

bantakal-1
ಪ್ರಥಮ ವರ್ಷದ ಇಂಜಿನಿಯರಿಂಗ್ ಶಿಕ್ಷಣಕ್ಕೆ ಸೇರ್ಪಡೆಗೊಂಡ ವಿದ್ಯಾರ್ಥಿಗಳ ಮಾರ್ಗದರ್ಶನ ಕಾರ್ಯಕ್ರಮವನ್ನು ನಿವೃತ್ತ ನ್ಯಾಯಮೂರ್ತಿ ಜಸ್ಟಿಸ್ ಸಂತೋಷ್ ಹೆಗ್ಡೆ ಉದ್ಘಾಟಿಸಿದರು
Published on

ಶಿರ್ವ: ಪ್ರತಿಯೊಬ್ಬ ನಾಗರಿಕ ತಮ್ಮ ಸಂಪಾದನೆಯಲ್ಲೇ ತೃಪ್ತಿ ಪಡುವ ಮೂಲಕ ದುರಾಸೆಯಿಂದ ಮುಕ್ತರಾಗಿ ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಬೇಕು ಎಂದು ನಿವೃತ್ತ ನ್ಯಾಯಮೂರ್ತಿ ಜಸ್ಟಿಸ್ ಸಂತೋಷ್ ಹೆಗ್ಡೆ ಹೇಳಿದರು.

ಬಂಟಕಲ್ಲು ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ 2024-25ನೇ ಸಾಲಿನ ಪ್ರಥಮ ವರ್ಷದ ಇಂಜಿನಿಯರಿಂಗ್ ಶಿಕ್ಷಣಕ್ಕೆ ಸೇರ್ಪಡೆಗೊಂಡ ವಿದ್ಯಾರ್ಥಿಗಳ ಮಾರ್ಗದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಶ್ರೀಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನ ಉಪಾಧ್ಯಕ್ಷ ಪಿ.ಶ್ರೀನಿವಾಸ ತಂತ್ರಿ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆ ಕಾರ್ಯದರ್ಶಿ ರತ್ನಕುಮಾರ್, ಆಡಳಿತ ಮಂಡಳಿ ಸದಸ್ಯ ಹರೀಶ್ ಬೆಳ್ಮಣ್, ಸಂಸ್ಥೆ ಉಪ ಪ್ರಾಂಶುಪಾಲ ಡಾ.ಗಣೇಶ್ ಐತಾಳ್ ಉಪಸ್ಥಿತರಿದ್ದರು. ವಿದ್ಯಾರ್ಥಿ ಅಭಿಷೇಕ್ ಕಿಣಿ ಪ್ರಾರ್ಥಿಸಿದರು. ಸಂಸ್ಥೆಯ ಪ್ರಾಂಶುಪಾಲ ಡಾ.ತಿರುಮಲೇಶ್ವರ ಭಟ್ ಸ್ವಾಗತಿಸಿದರು. ಡಾ.ನಾಗರಾಜ ಭಟ್, ಡೀನ್ ಅಕಾಡೆಮಿಕ್ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಮತ್ತು ಅವರ ಪಾಲಕರಿಗೆ ಸಂಸ್ಥೆ ನಿಯಮಗಳ ಕುರಿತು ಮಾಹಿತಿ ನೀಡಿದರು. ಗಣಿತ ಶಾಸ್ತ್ರ ವಿಭಾಗ ಮುಖ್ಯಸ್ಥ ಡಾ.ಲೊಲಿಟಾ ಪ್ರಿಯ ಕ್ಯಾಸ್ತಲಿನೊ ಪರಿಚಯಿಸಿದರು. ಸಂಸ್ಥೆಯ ಪ್ರಾಧ್ಯಾಪಕಿ ಪ್ರೀತಿ ಮತ್ತು ಸಚಿನ್ ಪ್ರಭು ಕಾರ್ಯಕ್ರಮ ನಿರೂಪಿಸಿದರು. ಪ್ರಥಮ ವರ್ಷದ ಇಂಜಿನಿಯರಿಂಗ್ ವಿಭಾಗ ಸಂಯೋಜಕಿ ಡಾ.ದೀಪಿಕಾ ಬಿ.ವಿ. ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net