ಅಪಾರ್ಟ್​​ಮೆಂಟ್​ನ 12ನೇ ಮಹಡಿಯಿಂದ ಹಾರಿ ಪ್ರಾಣ ಕಳ್ಕೊಂಡ್ಲು 10ನೇ ತರಗತಿ ವಿದ್ಯಾರ್ಥಿನಿ

Jessica
Published on

ಬೆಂಗಳೂರು: ಮಕ್ಕಳು ಅಪಾರ್ಟ್​ಮೆಂಟ್​ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಕೆಲವು ಪ್ರಕರಣಗಳು ನಡೆದಿದ್ದು, ಇದೀಗ ಅಂಥದ್ದೇ ಇನ್ನೊಂದು ಪ್ರಕರಣ ನಡೆದಿದೆ. ಇಲ್ಲಿ ವಿದ್ಯಾರ್ಥಿನಿಯೊಬ್ಬಳು 12ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ರಾಜಧಾನಿ ಬೆಂಗಳೂರಿನ ಬೆಳ್ಳಂದೂರಿನ ಅಪಾರ್ಟ್​ಮೆಂಟ್​ನಲ್ಲಿ ಇಂದು ಈ ಘಟನೆ ನಡೆದಿದೆ. ಖಾಸಗಿ ಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಜೆಸ್ಸಿಕಾ (15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ಈಕೆ ಇಲ್ಲಿನ ಅಪಾರ್ಟ್​ಮೆಂಟ್​ವೊಂದರ 11ನೇ ಮಹಡಿಯಲ್ಲಿ ಕಳೆದ ಎರಡು ವರ್ಷಗಳಿಂದ ತಂದೆ-ತಾಯಿ ಜೊತೆ ವಾಸವಿದ್ದಳು. ಇವರು ಮೂಲತಃ ತಮಿಳುನಾಡಿನವರಾಗಿದ್ದು, ತಂದೆ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ.

ಈಕೆ ಇಂದು ಬೆಳಗ್ಗೆ 10.30ರ ಸುಮಾರಿಗೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ 12ನೇ ಮಹಡಿಗೆ ಹೋಗಿ ಅಲ್ಲಿಂದ ಹಾರಿ ಪ್ರಾಣ ಕಳೆದುಕೊಂಡಿದ್ದಾಳೆ. ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ. ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net