Mobile ಬಳಸಬೇಡ ಎಂದು ಬುದ್ದಿವಾದ ಹೇಳಿದ ಶಿಕ್ಷಕ; ಬೆಟ್ಟದಿಂದ ಜಿಗಿದ ವಿದ್ಯಾರ್ಥಿ

Student
Published on

ಭೋಪಾಲ್​: ಶಾಲೆಯ ಆವರಣದಲ್ಲಿ ಮೊಬೈಲ್​ (Mobile) ಬಳಸಬೇಡ ಎಂದು ಹೇಳಿದ್ದಕ್ಕೆ ಕುಪಿತಗೊಂಡು ವಿದ್ಯಾರ್ಥಿಯೋರ್ವ ಬೆಟ್ಟದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ನಡೆದಿದೆ. 

ಮೃತರನ್ನು ರಾಜ್ ಒಸರಿ (17) ಎಂದು ಗುರುತಿಸಲಾಗಿದ್ದು, ಈತ ಖಾರ್ಗೋನ್ ಜಿಲ್ಲೆಯ ಗುಲ್ವಾಡ್‌ನ ಸರ್ಕಾರಿ ಸೆಕೆಂಡೆರಿ ಶಾಲೆಯಲ್ಲಿ 12ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಎಂದು ವರದಿಯಾಗಿದೆ. 

ಈ ಕುರಿತು ಮಾಹಿತಿ ನೀಡಿರುವ ಖಾರ್ಗೋನ್​ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಧರ್ಮರಾಜ್ ಮೀನಾ, ಮಂಡ್ಲೇಶ್ವರ ಪ್ರದೇಶದ ಗುಲ್ವಾಡ್‌ನಲ್ಲಿರುವ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿ ಹಾಸ್ಟೆಲ್‌ನಲ್ಲಿದ್ದುಕೊಂಡು ವ್ಯಾಸಂಗ ಮಾಡುತ್ತಿದ್ದ. ನವೆಂಬರ್​ 06ರಂದು ಶಾಲೆಗೆ ಮೊಬೈಲ್​ (Mobile) ತೆಗೆದುಕೊಂಡು ಬಂದು ಆವರಣದಲ್ಲಿ ಸೆಲ್ಫಿ ಕ್ಲಿಕ್ಕಿಸುತ್ತಿದ್ದ. ಇದನ್ನು ಗಮನಿಸಿದ ಶಿಕ್ಷಕರು ಈ ರೀತಿ ಮಾಡದಂತೆ ಆತನಿಗೆ ಬುದ್ದಿವಾದ ಹೇಳಿದ್ದಾರೆ. 

ಶಿಕ್ಷಕರ ಬುದ್ದಿಮಾತಿನಿಂದ ಕುಪಿತಗೊಂಡ ವಿದ್ಯಾರ್ಥಿಯು ಜಿಲ್ಲೆಯ ಐತಿಹಾಸಿಕ ಸ್ಥಳವಾದ ಜಾಮ್​ಗೇಟ್​ ಬೆಟ್ಟದ ಮೇಲಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಧರ್ಮರಾಜ್ ಮೀನಾ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net