ಶಾಮಿಯಾನದ ಕಂಬ ಮುಟ್ಟಿದ ವಿದ್ಯಾರ್ಥಿ ಸಾವು: ಈಜು ಸ್ಪರ್ಧೆಗೆ ರಾಮನಗರಕ್ಕೆ ಆಗಮಿಸಿದ್ದವ ದುರಂತ ಅಂತ್ಯ

death
Published on

ರಾಮನಗರ: ಶಾಮಿಯಾನದ ಕಂಬ ಮುಟ್ಟಿದ್ದರಿಂದ ವಿದ್ಯುತ್​ ಪ್ರವಹಿಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ದುರ್ಘಟನೆ ಕಗ್ಗಲಿಪುರ ಪೊಲೀಸ್​ ಠಾಣೆ ವ್ಯಾಪ್ತಿಯ ಅಗರ ಗ್ರಾಮದಲ್ಲಿ ಸಂಭವಿಸಿದೆ.

ಕೇರಳದ ತ್ರಿಸೂರು ಮೂಲದ ವಿದ್ಯಾರ್ಥಿ ರೋಷನ್​ ರಶೀದ್​ (17) ಮೃತ ದುರ್ದೈವಿ. ಕೆಂಗೇರಿ ಹೋಬಳಿಯ ಅಗರ ಗ್ರಾಮದ ನ್ಯಾಷನಲ್​ ಪಬ್ಲಿಕ್​ ಶಾಲೆಯಲ್ಲಿ ನಡೆಯುತ್ತಿದ್ದ ದಕ್ಷಿಣ ವಲಯ ಈಜು ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ರೋಷನ್ ಆಗಮಿಸಿದ್ದ. ಈಜು ಸ್ಪರ್ಧೆ ಹಿನ್ನೆಲೆ ಶಾಲಾ ಆವರಣದಲ್ಲಿ ಶಾಮಿಯಾನ ಹಾಕಲಾಗಿತ್ತು.

ಬುಧವಾರ ಶಾಮಿಯಾನದ ಕಂಬ ಮುಟ್ಟಿದ ರೋಷನ್​ಗೆ ವಿದ್ಯುತ್​ ಪ್ರವಹಿಸಿದ್ದು, ಅಸ್ವಸ್ಥನಾಗಿದ್ದ. ತಕ್ಷಣ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ನಂತರ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ. ಮಗನ ಸಾವಿನಿಂದ ನೊಂದಿರುವ ಪಾಲಕರು ಸ್ಪರ್ಧೆ ಆಯೋಜಕರ ವಿರುದ್ಧ ಕಗ್ಗಲಿಪುರ ಠಾಣೆಗೆ ದೂರು ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net