More

    ವಿದ್ಯಾರ್ಥಿಗಳಿಗೆ ಸಹಕಾರಿ ನಗು ಮಗು

    ದೇವದುರ್ಗ: ಬೇಸಿಗೆ ರಜೆಯಲ್ಲಿ ವಿದ್ಯಾರ್ಥಿಗಳು ಪಠ್ಯ ಹಾಗೂ ಪಠ್ಯೇತರ ಚುಟವಟಿಕೆಗಳಿಂದ ದೂರ ಉಳಿಯದಿರಲಿ ಎಂದು ಮೂರು ದಿನ ನಗು ಮಗು ಶಿಬಿರ ಆಯೋಜಿಸಲಾಗಿದೆ. ಈ ಕಾರ್ಯಕ್ರಮ ವಿದ್ಯಾರ್ಥಿಗಳಲ್ಲಿ ಸ್ಫೂರ್ತಿ ತುಂಬಲಿದೆ ಎಂದು ಕೋತಿಗುಡ್ಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕಿ ನಾಗಲಕ್ಷ್ಮೀ ಹೇಳಿದರು.

    ಮಾನಸಗಲ್ ಗ್ರಾಮದಲ್ಲಿ ಶಿಕ್ಷಣ ಇಲಾಖೆ, ಅಜೀಮ್ ಪ್ರೇಮ್‌ಜಿ ಫೌಂಡೇಷನ್ ಸಹಯೋಗದಲ್ಲಿ ಆಯೋಜಿಸಿದ್ದ ನಗು ಮಗು ತರಬೇತಿ ಶಿಬಿರ ಉದ್ಘಾಟಿಸಿ ಗುರುವಾರ ಮಾತನಾಡಿದರು. ಶಿಕ್ಷಣದೊಂದಿಗೆ ಪಠ್ಯೇತರ ವಿಷಯದ ಬಗ್ಗೆಯೂ ಬೋಧನೆ ಮಾಡಲಾಗುತ್ತಿದ್ದು, ವಿದ್ಯಾರ್ಥಿಗಳು ಶಿಬಿರದಲ್ಲಿ ಪಾಲ್ಗೊಳ್ಳಬೇಕು. ಪ್ರತಿಭೆ ಗುರುತಿಸಲು ಶಿಬಿರ ಸಹಕಾರಿಯಾಗಿದ್ದು, ವಿದ್ಯಾರ್ಥಿಗಳು ಕೌಶಲ ಪ್ರದರ್ಶಿಸಬೇಕು ಎಂದರು. ಪ್ರಮುಖರಾದ ರಮೇಶ ಕುಲಕರ್ಣಿ, ಸಿದ್ದಲಿಂಗಪ್ಪ ಕಾಕರಗಲ್, ಮಕ್ಕಳ ಪ್ರತಿನಿಧಿಗಳಾದ ಮೀನಾಕ್ಷಿ, ಸುಶೀಲಾದೇವಿ, ಪದ್ಮಾವತಿ, ರಂಗಮ್ಮ, ಶಿವನಮ್ಮ, ಸುಮಿತ್ರಾ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts