

ವಿಜಯವಾಣಿ ಸುದ್ದಿಜಾಲ ಸುಳ್ಯ
ವಿದ್ಯಾರ್ಥಿ ಸಂಘಟನೆ ಪ್ರಜಾಪ್ರಭುತ್ವ ವ್ಯವಸ್ಥೆಯ ತರಬೇತಿ ಕೇಂದ್ರವಾಗಿ ಬದಲಾದರೆ, ಇಂದಿನ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಶಾಸಕಾಂಗದ ಚುಕ್ಕಾಣಿ ಹಿಡಿಯಲು ಪ್ರೇರಣೆ ದೊರಕುತ್ತದೆ ಎಂದು ಲೇಖಕ, ಸಂಶೋಧಕ ಡಾ.ಸುಂದರ ಕೇನಾಜೆ ಹೇಳಿದರು.
ಅವರು ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು ಮಾತನಾಡಿ, ಕಾಲೇಜಿನ ಸಮಗ್ರ ಅಭಿವೃದ್ಧಿಯಲ್ಲಿ ವಿದ್ಯಾರ್ಥಿ ಸಂಘ ಬಹಳ ಮುಖ್ಯ. ಮುಂದಿನ ದಿನಗಳಲ್ಲಿ ಕಾಲೇಜಿನಲ್ಲಿ ನಡೆಯುವ ಎಲ್ಲ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಸಕ್ರಿಯವಾಗಿ ಪಾಲ್ಗೊಂಡು ಸಹಕರಿಸಬೇಕು ಎಂದರು.
ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ.ಎಂ.ಅಧ್ಯಕ್ಷತೆ ವಹಿಸಿದ್ದರು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಡಾ.ಕೆ.ಟಿ.ವಿಶ್ವನಾಥ, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ., ಆಂತರಿಕ ಗುಣಮಟ್ಟ ಖಾತ್ರಿ ಕೋಶ ಸಂಯೋಜಕಿ ಡಾ.ಮಮತಾ ಕೆ., ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಚಿನ್ನಪ್ಪ ಗೌಡ, ಉಪನಾಯಕಿ ಗಾನ, ಕಾರ್ಯದರ್ಶಿ ಸೂರ್ಯದರ್ಶನ್ ಪಿ.ಎ., ಜತೆ ಕಾರ್ಯದರ್ಶಿ ಉಜಾನ ಕೆ., ಸಾಂಸ್ಕೃತಿಕ ಕಾರ್ಯದರ್ಶಿಗಳಾದ ದಕ್ಷಯ್ ಡಿ.ಎಸ್.ಹಾಗೂ ಅಂಬಿಕಾ ಎಂ., ಹಾಗೂ ಕ್ರೀಡಾ ಕಾರ್ಯದರ್ಶಿಗಳಾದ ಶಶಾಂಕ್ ಪಿ.ವಿ.ಹಾಗೂ ತೃಪ್ತಿ ಪಿ.ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ.ವಿದ್ಯಾರ್ಥಿ ಸಂಘದ ಎಲ್ಲ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು.
ಬಳಿಕ ಅರ್ಹ ವಿದ್ಯಾರ್ಥಿಗಳಿಗೆ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ವಿದ್ಯಾರ್ಥಿ ವೇತನ ವಿತರಿಸಲಾಯಿತು.
ವಿದ್ಯಾರ್ಥಿನಿ ಶ್ರೀಲಯ ಪ್ರಾರ್ಥಿಸಿದರು, ವಿದ್ಯಾರ್ಥಿ ಸಂಘದ ನಾಯಕ ಆದಿತ್ಯ ಡಿ.ಕೆ.ಸ್ವಾಗತಿಸಿದರು. ಅನ್ವಯ ಹಾಗೂ ಅಕ್ಷತಾ ಸಿ.ನಿರೂಪಿಸಿದರು. ಸೂರ್ಯದರ್ಶನ್ ಪಿ.ಎ. ವಂದಿಸಿದರು.