

ಮೂಡುಬಿದಿರೆ: ಶಿಕ್ಷಣವನ್ನು ವಿದ್ಯಾರ್ಥಿಗಳು, ಪಾಲಕರು ಗಂಭೀರವಾಗಿ ತೆಗೆದುಕೊಳ್ಳಬೇಕು. ಪಾಲಕರು ಮಕ್ಕಳಲ್ಲಿರುವ ಬುದ್ಧಿಮತ್ತೆ ಗಮನಿಸಿ ಅದಕ್ಕೆ ಪೂರಕ ಅವಕಾಶ ಕಲ್ಪಿಸಿಕೊಡಬೇಕು. ವಿದ್ಯಾರ್ಥಿಗಳಿಗೆ ಸರಿಯಾದ ಸಮಯದಲ್ಲಿ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಹೇಳಿದರು.
ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನ ಆಡಳಿತ ಮಂಡಳಿ, ಸಾಧನಾ-ಸ್ಪಂದನ ಯುವ ಕಲಾ ರಂಗ, ಗುರುಕಾಷ್ಠಶಿಲ್ಪ ಸಮಿತಿ ವತಿಯಿಂದ ಭಾನುವಾರ ವಿಶ್ವಕರ್ಮ ಸಭಾಭವನದಲ್ಲಿ ಆಯೋಜಿಸಲಾದ ಶಿಕ್ಷಣ ಮಾಹಿತಿಗಾಗಿ ವಿದ್ಯಾರ್ಥಿಗಳು ಮತ್ತು ಪಾಲಕರ ಸಮಾವೇಶ ಉದ್ಘಾಟಿಸಿ ಮಾತನಾಡಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ನಿಟ್ಟೆ ಪರಿಗಣಿತ ವಿವಿಯ ಪ್ರೊ.ಡಾ.ಸುಧೀರ್‌ರಾಜ್ ಕೆ, ಉಪನ್ಯಾಸಕ ಹರ್ಷವರ್ಧನ ನಿಟ್ಟೆ, ವಾಗ್ಮಿ ಎನ್. ಆರ್.ದಾಮೋದರ ಶರ್ಮ ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿ ನೀಡಿದರು. ಕ್ಷೇತ್ರದ ಆಡಳಿತ ಮೊಕ್ತೇಸರ ಬಾಲಕೃಷ್ಣ ಆಚಾರ್ಯ, ಮೊಕ್ತೇಸರರಾದ ಶಿವರಾಮ ಆಚಾರ್ಯ, ಯೋಗೀಶ ಆಚಾರ್ಯ, ಗುರುಕಾಷ್ಠಶಿಲ್ಪ ಸಮಿತಿಯ ಅಧ್ಯಕ್ಷ ಜಗದೀಶ ಆಚಾರ್ಯ, ಕಾಳಿಕಾಂಬಾ ಮಹಿಳಾ ಸಮಿತಿಯ ಅಧ್ಯಕ್ಷೆ ಶಾಂತಲಾ ಸೀತಾರಾಮ ಆಚಾರ್ಯ, ಸೇವಾ ಸಮಿತಿಯ ಉಪಾಧ್ಯಕ್ಷ ಭಾಸ್ಕರ ಆಚಾರ್ಯ, ಇಂಜಿನಿಯರ್ ಗಂಗಾಧರ ಆಚಾರ್ಯ ಉಪಸ್ಥಿತರಿದ್ದರು.
ಸಂಯೋಜಕ ಜಿ.ಎಸ್.ಪುರಂದರ ಆಚಾರ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಧುಶ್ರೀ ತಾಕೋಡೆ ಕಾರ್ಯಕ್ರಮ ನಿರ್ವಹಿಸಿದರು.