ನಾಯಕತ್ವ ರೂಢಿಸಿಕೊಳ್ಳಲು ವಿದ್ಯಾರ್ಥಿ ಸಂಸತ್ತು ಪೂರಕ

sid (1)
Published on

ವಿಜಯವಾಣಿ ಸುದ್ದಿಜಾಲ ಆರ್ಡಿ

ಶಾಲೆಯಲ್ಲಿ ಶಿಸ್ತು, ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣವನ್ನು ಮೈಗೂಡಿಸಿಕೊಳ್ಳುವಲ್ಲಿ ವಿದ್ಯಾರ್ಥಿ ಸಂಸತ್ತು ಪೂರಕವಾಗಲಿದೆ. ವಿದ್ಯಾರ್ಥಿ ಜೀವನ ಅಮೂಲ್ಯವಾದ್ದು ಈ ನಿಟ್ಟಿನಲ್ಲಿ ವ್ಯಾಸಂಗಕ್ಕೆ ಹೆಚ್ಚಿನ ಆದ್ಯತೆ ನೀಡಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಆರ್ಡಿ ಬೆಳ್ವೆ ಗೋಳಿಯಂಗಡಿ ಲಯನ್ಸ್ ಕ್ಲಬ್ ಸ್ಥಾಪಾಕಾಧ್ಯಕ್ಷ ಬಿ.ರಾಜೇಂದ್ರ ಕಿಣಿ ಬೆಳ್ವೆ ಹೇಳಿದರು.

ಆರ್ಡಿ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಸರ್ಕಾರಿ ಪ್ರೌಢಶಾಲೆಯಲ್ಲಿ ಶನಿವಾರ ನೂತನ ವಿದ್ಯಾರ್ಥಿ ಸಂಸತ್ತು ಹಾಗೂ ವಿವಿಧ ಸಂ ಉದ್ಘಾಟಿಸಿ ವಾತನಾಡಿದರು.

ಮುಖ್ಯ ಶಿಕ್ಷಕಿ ಪ್ರತಿವಾ ಅಧ್ಯಕ್ಷತೆ ವಹಿಸಿದರು. ಆರ್ಡಿ ಬೆಳ್ವೆ ಗೋಳಿಯಂಗಡಿ ಲಯನ್ಸ್ ಕ್ಲಬ್ ನಿಯೋಜಿತ ಅಧ್ಯಕ್ಷ ಅಣ್ಣಯ್ಯ ಶೆಟ್ಟಿ ಕಮ್ಗೋಳಿ, ಪತ್ರಕರ್ತ ಕೆ.ಸಂಜೀವ ಆರ್ಡಿ, ಸಹ ಶಿಕ್ಷಕರಾದ ಪ್ರಕಾಶ್ ಭಟ್, ಮೋಹನ್‌ಕುವಾರ್ ಶೆಟ್ಟಿ, ವೈಶಾಲಿ ರಾವ್, ಜಯಶೀಲ ಶೆಟ್ಟಿ, ಶ್ರೀಕಾಂತ ನಾಯಕ್, ಸುಮಲತಾ, ದೈಹಿಕ ಶಿಕ್ಷಣ ಶಿಕ್ಷಕಿ ಹೇಮಲತಾ, ಅತಿಥಿ ಶಿಕ್ಷಕಿ ದೀಪಾ, ಜ್ಯೋತಿ, ಸಿಬ್ಬಂದಿ ಜೋತ್ಸ್ನಾ ಉಪಸ್ಥಿತರಿದ್ದರು. ಮುಖ್ಯಶಿಕ್ಷಕಿ ಪ್ರತಿವಾ ಸ್ವಾಗತಿಸಿ, ಶಿಕ್ಷಕ ಶ್ರೀಕಾಂತ್ ನಾಯಕ್ ವಂದಿಸಿದರು. ಶಿಕ್ಷಕ ಮೋಹನ ಕುವಾರ್ ಶೆಟ್ಟಿ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net