

ವಿಜಯವಾಣಿ ಸುದ್ದಿಜಾಲ ಉಡುಪಿ
ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಇನ್ನಿತರ ಶೈಕ್ಷಣಿಕ ಚಟುವಟಿಕೆಗಳಲ್ಲಿ ಪಾಲ್ಗೊಂಡು ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು. ಸ್ವಯಂ ಆಲೋಚನಾ ಶಕ್ತಿಯಿಂದ, ಆತ್ಮ ವಿಶ್ವಾಸದಿಂದ, ಮೇಧಾಶಕ್ತಿ ಹಾಗೂ ಕೌಶಲ ವೃದ್ಧಿಸಿಕೊಂಡು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಬೇಕು ಎಂದು ಎಂಜಿಎಂ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ನಿವೃತ್ತ ಮುಖ್ಯಸ್ಥ ಕೆ.ಸುರೇಂದ್ರನಾಥ ಶೆಟ್ಟಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಉಡುಪಿಯ ಇಂದ್ರಾಳಿಯಲ್ಲಿರುವ ಇಂದ್ರಾಳಿ ಆಂಗ್ಲ ಪ್ರೌಢಶಾಲೆಯಲ್ಲಿ ಜೂನ್ 14ರಂದು ಆಯೋಜಿಸಿದ್ದ ವಿದ್ಯಾರ್ಥಿ ಸಂಸತ್ ಹಾಗೂ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಹೆತ್ತವರು ಮತ್ತು ಶಿಕ್ಷಕರು ಹೆಚ್ಚಿನ ಉತ್ತೇಜನ ನೀಡಬೇಕಾಗಿದೆ. ಜಾಗತೀಕರಣದ ಸ್ಪಧಾ೯ತ್ಮಕ ಜಗತ್ತಿನಲ್ಲಿ ಯಶಸ್ವಿಗಳಿಸುವಲ್ಲಿ ಇಚ್ಛಾಶಕ್ತಿ, ಕೌಶಲಶಕ್ತಿ, ಸಂವಹನ ಶಕ್ತಿ ವೃದ್ಧಿಸುವಲ್ಲಿ ಇಂತಹ ಪಠ್ಯೇತರ ಚಟುವಟಿಕೆಗಳು ಹೆಚ್ಚಿನ ಮಹತ್ವ ಪಡೆದುಕೊಳ್ಳುತ್ತದೆ. | ಕೆ.ಸುರೇಂದ್ರನಾಥ ಶೆಟ್ಟಿ. ನಿವೃತ್ತ ಉಪನ್ಯಾಸಕ