20.3 C
Bangalore
Sunday, December 15, 2019

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು ಫ್ಯಾಕ್ಟ್​ಚೆಕ್​ನಲ್ಲಿ ಬಯಲು!

Latest News

ಆರೋಗ್ಯದಲ್ಲಿ ಚೇತರಿಕೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಆಸ್ಪತ್ರೆಯಿಂದ ಬಿಡುಗಡೆ

ಬೆಂಗಳೂರು: ಅನಾರೋಗ್ಯ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಹಿಂದೆ ಆಸ್ಪತ್ರೆ ದಾಖಲಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಇಂದು (ಭಾನುವಾರ) ಆಸ್ಪತ್ರೆಯಿಂದ ಬಿಡುಗೆಯಾಗಿ ಮನೆಗೆ ತೆರಳಲಿದ್ದಾರೆ.ಸ್ಟಂಟ್​ನಲ್ಲಿ...

ಜೆಡಿಎಸ್ ಜನ್ಮ ಜಾಲಾಟ, ವರಿಷ್ಠರಿಗೆ ಪೀಕಲಾಟ

ಬೆಂಗಳೂರು: ಸಾಲು ಸಾಲು ಸೋಲಿನಿಂದ ದಳಪತಿಗಳು ಕಂಗೆಟ್ಟಿದ್ದಾರೆ. ಲೋಕಸಭಾ ಚುನಾವಣೆ ಸೋಲಿ ನಿಂದ ಬೇಗುದಿ ಹೆಚ್ಚುತ್ತಿದ್ದು, ಮೈತ್ರಿ ಸರ್ಕಾರ ಪತನ, ಉಪಚುನಾವಣೆಯ ಹೀನಾಯ...

ಮೊದಲ ಟೆಸ್ಟ್​​ನಲ್ಲಿ ಆಸ್ಟ್ರೇಲಿಯಾಕ್ಕೆ ಬೃಹತ್ ಮುನ್ನಡೆ

ಪರ್ತ್: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಬೃಹತ್ ಮುನ್ನಡೆ ಕಂಡಿರುವ ಆತಿಥೇಯ ಆಸ್ಟ್ರೇಲಿಯಾ ತಂಡ ಅಹರ್ನಿಶಿ ಟೆಸ್ಟ್ ಪಂದ್ಯಗಳಲ್ಲಿನ ತನ್ನ...

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ ಹಾವು: ವಿಡಿಯೋ ಬಗ್ಗೆ ಬಿಸಿಸಿಐ ಹೇಳಿದ್ದೇನು?

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ...

ವಿದೇಶಿ ಮಹಿಳೆಯಿಂದ ಪಿಂಡಪ್ರದಾನ

ಹೊಸಪೇಟೆ (ಬಳ್ಳಾರಿ): ದಕ್ಷಿಣ ಆಫ್ರಿಕಾದ ಮಹಿಳೆಯೊಬ್ಬರು ತಾಯಿಯ ಆತ್ಮಕ್ಕೆ ಶಾಂತಿ, ಸದ್ಗತಿ ದೊರೆಯಲೆಂದು ಶನಿವಾರ ಹಂಪಿ ನದಿ ತೀರದಲ್ಲಿ ಪುರೋಹಿತರ ನೇತೃತ್ವದಲ್ಲಿ ಹಿಂದು ಧಾರ್ವಿುಕ ವಿಧಿವಿಧಾನಗಳಂತೆ...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ “ಆಜಾದಿ” ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ.

“ಜೆಎನ್​ಯು ನಿಮಗಾಗಿ” ಎಂಬ ಅಡಿಬರಹವನ್ನು ಬರೆದು ಆಯುಷ್ಮಾನ್​ ಶುಕ್ಲಾ ಹೆಸರಿನ ಫೇಸ್​ಬುಕ್​ ಪೇಜ್​ನಲ್ಲಿ ಪಾಕ್​ ವಿದ್ಯಾರ್ಥಿಗಳು ಘೋಷಣೆ ಕೂಗುವ ವಿಡಿಯೋವನ್ನು ಶೇರ್​ ಮಾಡಲಾಗಿದೆ. ಸದ್ಯ ಶುಕ್ಲಾ ಅವರು ಅಡಿಬರಹವನ್ನು ತೆಗೆದಿದ್ದರೂ ವಿಡಿಯೋ ಮಾತ್ರ ಹಾಗೇ ಇದೆ. ಇದುವರೆಗೂ 400ಕ್ಕೂ ಹೆಚ್ಚು ಬಾರಿ ಶೇರ್​ ಆಗಿದ್ದು, ಸುಮಾರು 40,000ಕ್ಕೂ ಹೆಚ್ಚು ವೀಕ್ಷಣೆಯಾಗಿದೆ.

ವಿಡಿಯೋ ಅಸಲಿಯತ್ತು ಹೀಗಿದೆ…
ಗೂಗಲ್​ ಫೋಟೋ​ ರಿವರ್ಸ್​ ಇಮೆಜಿಂಗ್​ನಲ್ಲಿ ಶೇರ್​ ಮಾಡಲಾಗಿರುವ ವಿಡಿಯೋವು ಇತ್ತೀಚೆಗಷ್ಟೇ ಪಾಕಿಸ್ತಾನದ ಲಾಹೋರ್​ನಲ್ಲಿ ನಡೆದ ಫೈಜ್​ ಸಾಹಿತ್ಯೋತ್ಸವ-2019 ಕಾರ್ಯಕ್ರಮದ್ದು ಎಂದು ತಿಳಿದುಬಂದಿದೆ.

#FaizFestival2019 ಹ್ಯಾಷ್​​ಟ್ಯಾಗ್​ ಮೂಲಕ ಟ್ವಿಟರ್​ ಹಾಗೂ ಫೇಸ್​ಬುಕ್​ನಲ್ಲಿ ಹುಡುಕಾಡಿದಾಗ ಮೂಲ ವಿಡಿಯೋವನ್ನು ಲಾಹೋರ್​ ಮೂಲದ ಫೋಟೋಗ್ರಾಫರ್​ ಹಾಗೂ ಕಾರ್ಯಕರ್ತ ಖಲೀದ್​ ಮಹ್ಮೂದ್​ ಅಪ್​ಲೋಡ್​ ಮಾಡಿರುವುದು ಗೊತ್ತಾಗಿದೆ. ಇದೇ ವಿಡಿಯೋವನ್ನು ಲಾಹೋರ್​ ವಿದ್ಯಾರ್ಥಿ ಕಾರ್ಯಕರ್ತ ಹಾಗೂ ಶೇರ್​ ಆಗಿರುವ ವಿಡಿಯೋದಲ್ಲಿ ವಿದ್ಯಾರ್ಥಿಗಳ ಮೆರವಣಿಗೆಯ ಮುಂದಾಳತ್ವ ವಹಿಸಿರುವ ಹೈದರ್​ ಬುಟ್ಟ್​ ಎಂಬುವವರು ಕೂಡ ಶೇರ್​ ಮಾಡಿಕೊಂಡಿದ್ದಾರೆ.

ಮೂಲ ವಿಡಿಯೋವನ್ನು ನೋಡಿದಾಗ ವಿದ್ಯಾರ್ಥಿಗಳ ಮೆರವಣಿಗೆಯ ನಡುವೆ ಕಟ್ಟಡದ ಗೋಡೆಯೊಂದರಲ್ಲಿ ಅಳವಡಿಸಲಾಗಿದ್ದ ಪಾಕ್​ ಕವಿ ಫೈಜ್​ ಅಹ್ಮದ್​ ಫೈಜ್​ ಅವರ ಫೋಟೋವುಳ್ಳ ಬ್ಯಾನರ್​ ಕಾಣಿಸುತ್ತದೆ. ಇವರ ನೆನಪಿನಾರ್ಥ ಲಾಹೋರ್​​ನಲ್ಲಿ ಆಯೋಜಿಸಲಾಗಿದ್ದ ಫೈಜ್​ ಸಾಹಿತ್ಯೋತ್ಸವ ಎಂಬುದು ಇದರಿಂದಲೇ ಸ್ಪಷ್ಟವಾಗುತ್ತದೆ.

ಪಾಕಿಸ್ತಾನದಲ್ಲಿ ವಿದ್ಯಾರ್ಥಿ ಒಕ್ಕೂಟಕ್ಕೆ ಹೇರಲಾಗಿದ್ದ ನಿಷೇಧವನ್ನು ಹಿಂಪಡೆದುಕೊಳ್ಳುವಂತೆ ಒತ್ತಾಯಿಸಿ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿ ಸಂಘಟನೆ ಪ್ರತಿಭಟನಾ ರ‍್ಯಾಲಿಯನ್ನು ಹಮ್ಮಿಕೊಂಡಿದ್ದವು ಎಂದು ಮಾಧ್ಯಮಗಳು ಈ ಹಿಂದೆ ವರದಿ ಮಾಡಿದ್ದವು. ಅಲ್ಲದೆ ಫೇಸ್​ಬುಕ್​ನಲ್ಲಿಯು ಇದಕ್ಕೆ ಸಂಬಂಧಿಸಿದ ಪೋಸ್ಟ್​ಗಳು ಹರಿದಾಡಿದ್ದವು. ಆದರೆ ಅದೇ ವಿಡಿಯೋವನ್ನು ಹಾಸ್ಟೆಲ್​ ಪ್ರವೇಶ ದರವನ್ನು ಹೆಚ್ಚಳ ಮಾಡಿರುವ ಜೆಎನ್​ಯು ವಿಶ್ವವಿದ್ಯಾಲಯದ ವಿರುದ್ಧ ವಿದ್ಯಾರ್ಥಿಗಳ ನಡೆಸುತ್ತಿರುವ ಪ್ರತಿಭಟನೆಗೆ ತಪ್ಪಾಗಿ ತಳುಕು ಹಾಕಲಾಗಿದೆ. (ಏಜೆನ್ಸೀಸ್​)​

Anshuman Shukla ಅವರಿಂದ ಈ ದಿನದಂದು ಪೋಸ್ಟ್ ಮಾಡಲಾಗಿದೆ ಭಾನುವಾರ, ನವೆಂಬರ್ 17, 2019

Stay connected

278,754FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...