More

    ಸಾರಿಗೆ ಅವ್ಯವಸ್ಥೆ ಖಂಡಿಸಿ ಪ್ರತಿಭಟನೆ

    ವಿಜಯವಾಣಿ ಸುದ್ದಿಜಾಲ ಲಕ್ಷೆ್ಮೕಶ್ವರ

    ಗದಗ ನಗರಕ್ಕೆ ಹೋಗಲು ಅಗತ್ಯ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ನೂರಾರು ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳು ಸ್ಥಳೀಯ ಬಸ್ ನಿಲ್ದಾಣದಲ್ಲಿ ಶುಕ್ರವಾರ ಬಸ್ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.

    ಗದಗ ಕಡೆ ಹೋಗಲು ಬೆಳಗಿನ ವೇಳೆ ಬಸ್ ಸೌಲಭ್ಯ ಕಡಿಮೆ ಇರುವುದರಿಂದ ಶಾಲೆ, ಕಾಲೇಜು ವಿದ್ಯಾರ್ಥಿಗಳಿಗೆ, ಸರ್ಕಾರಿ ನೌಕರರಿಗೆ ಹಾಗೂ ಪ್ರಯಾಣಕರಿಗೆ ತೀವ್ರ ತೊಂದರೆ ಅಗುತ್ತಿದೆ. ಪ್ರತಿದಿನ ಬಸ್ ಕೈಕೊಡುವುದರಿಂದ ಕಾಲೇಜ್​ಗೆ ತಡವಾಗಿ ಹೋಗುವಂತಾಗಿದೆ. ಅಲ್ಲದೆ, ಬೇರೆ ಬೇರೆ ಡಿಪೋಗಳಿಂದ ಬರುವ ಬಸ್​ಗಳು ತುಂಬಿಕೊಂಡು ಬರುತ್ತವೆ. ಅದರಲ್ಲಿ ವಿದ್ಯಾರ್ಥಿನಿಯರು ತೆರಳಲು ಪರದಾಡುವಂತಾಗಿದೆ. ಬೆಳಗ್ಗೆ ಬಸ್ ಸೌಲಭ್ಯ ಹೆಚ್ಚಿಸುವಂತೆ ಅನೇಕ ಬಾರಿ ಮನವಿ ಮಾಡಲಾಗಿದೆ. ಆದರೆ, ಸಾರಿಗೆ ಇಲಾಖೆ ಅಧಿಕಾರಿಗಳು ಕ್ಯಾರೇ ಅನ್ನುತ್ತಿಲ್ಲ ಎಂದು ಪ್ರತಿಭಟನೆ ನೇತೃತ್ವ ವಹಿಸಿದ್ದ ಎಬಿವಿಪಿ ಕಾರ್ಯಕರ್ತ ಮಹಾಂತೇಶ ಮಣಕವಾಡ ಆಕ್ರೋಶ ವ್ಯಕ್ತಪಡಿಸಿದರು.

    ಘಟಕ ವ್ಯವಸ್ಥಾಪಕರು ಬರುವವರೆಗೆ ಬಸ್ ಬಿಡುವುದಿಲ್ಲ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು. ಸ್ಥಳಕ್ಕೆ ಆಗಮಿಸಿದ ಘಟಕ ವ್ಯವಸ್ಥಾಪಕ ಕೆ. ಶೇಖರ ನಾಯಕ ವಿರುದ್ಧ ಪ್ರಯಾಣಿಕರು ಹರಿಹಾಯ್ದರು. ಬೇರೆ ಬೇರೆ ಘಟಕಗಳ ಬಸ್​ಗಳು ಬರಲು ತಡವಾಗಿದ್ದರಿಂದ ಸಮಸ್ಯೆ ಉಂಟಾಗಿದೆ. ಗದಗ ಕಡೆ ತೆರಳುವ ಪ್ರಯಾಣಿಕರಿಗೆ ತೊಂದರೆ ಆಗದಂತೆ ಬಸ್ ಸೌಲಭ್ಯ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದ ನಂತರ ಪ್ರತಿಭಟನೆ ನಿಲ್ಲಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts