More

    ಹೆಚ್ಚುವರಿ ಬಸ್ ಬಿಡಲು ಆಗ್ರಹ: ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

    ಮಂಡ್ಯ: ಹೆಚ್ಚುವರಿ ಬಸ್‌ಗಳನ್ನು ಬಿಡಬೇಕೆಂದು ಹಾಗೂ ಸಮಯಕ್ಕೆ ಸರಿಯಾಗಿ ಬರುವಂತೆ ಕ್ರಮ ವಹಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ನಗರದ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು.
    ನಿಲ್ದಾಣದಲ್ಲಿ ಜಮಾಯಿಸಿದ ಚೀರನಹಳ್ಳಿ, ಹಳುವಾಡಿ, ತಗ್ಗಹಳ್ಳಿ ಮತ್ತು ಪುರ ಗ್ರಾಮದ ವಿದ್ಯಾರ್ಥಿಗಳು ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಸ್ಥಳದಲ್ಲಿಯೇ ಧರಣಿ ನಡೆಸಿ ಕೆಎಸ್‌ಆರ್‌ಟಿಸಿ ಡಿಸಿಗೆ ಮನವಿ ಸಲ್ಲಿಸಿದರು.
    ತಾಲೂಕಿನ ಚೀರನಹಳ್ಳಿ, ಹಳುವಾಡಿ, ತಗ್ಗಹಳ್ಳಿ ಮತ್ತು ಪುರ ಸೇರಿದಂತೆ ಈ ಮಾರ್ಗದಲ್ಲಿ ಕೇವಲ ಎರಡು ಬಸ್‌ಗಳು ಮಾತ್ರ ಸಂಚಾರ ಮಾಡುತ್ತಿವೆ. ಅದು ಬೆಳಗ್ಗೆ ಮತ್ತು ಸಂಜೆ ಮಾತ್ರ ಸಂಚಾರ ಮಾಡುವುದರಿಂದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದೆ. ಪರಿಣಾಮ ಸರಿಯಾದ ಸಮಯಕ್ಕೆ ತರಗತಿಗೆ ಬರಲು ಸಾಧ್ಯವಾಗುತ್ತಿಲ್ಲ. ಮಾತ್ರವಲ್ಲದೆ ಹೆಚ್ಚಿನ ಜನ ಬರುವುದರಿಂದ ಬಸ್‌ನಲ್ಲಿ ಜಾಗ ಸಿಗದಂತಾಗಿ ಒಂದೆಡೆ ಬಾಗುವುದರಿಂದ ವಿದ್ಯಾರ್ಥಿಗಳು ಕೆಳಗೆ ಬೀಳುವಂತಹ ಸ್ಥಿತಿ ನಿರ್ಮಾಣವಾಗುತ್ತದೆ. ಆದ್ದರಿಂದ ಈ ಮಾರ್ಗಕ್ಕೆ ಸಂಬಂಧಿಸಿದಂತೆ ಬೇರೆ ಬೇರೆ ಸಮಯಕ್ಕೆ ಬಸ್‌ಗಳನ್ನು ಬಿಡಬೇಕೆಂದು ಮನವಿ ಮಾಡಿದರು.
    ಪ್ರತಿಭಟನೆಯಲ್ಲಿ ದೇವಿಕಾ, ಸಿಂಧು, ಸಹನಾ, ಸಿಂಚನಾ, ಸೋನಾ, ಸೌಮ್ಯ, ಮಧು, ಐಶ್ವರ್ಯಾ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts