17.8 C
Bengaluru
Wednesday, January 22, 2020

ಸಂಚಾರ ನಿಯಮ ಪಾಲಿಸಿ, ಪಾಲಕರಿಗೂ ತಿಳಿಸಿ

Latest News

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ಎಲ್ಲರನ್ನೂ ಪ್ರೀತಿ, ಗೌರವದಿಂದ ಕಾಣಿ

ರಟ್ಟಿಹಳ್ಳಿ: ಸಮಾಜದಲ್ಲಿ ಎಲ್ಲರನ್ನೂ ಪ್ರೀತಿ ಮತ್ತು ಗೌರವದಿಂದ ಕಂಡರೆ ಎಲ್ಲರ ಮನಸ್ಸು ಗೆಲ್ಲಬಹುದು. ಯಾವುದೇ ವ್ಯಕ್ತಿ ಅಥವಾ ಸಮಾಜದ ವಿರುದ್ಧ ದ್ವೇಷ ಸಾಧಿಸಬಾರದು....

12ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ 27ರಿಂದ

ಹಾವೇರಿ: ಜಿಲ್ಲಾ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ 12ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜ. 27 ಹಾಗೂ 28ರಂದು...

ಶಿವಮೊಗ್ಗ: ವಿದ್ಯಾರ್ಥಿಗಳು ಸಂಚಾರ ಸುರಕ್ಷತೆ ನಿಯಮ ತಿಳಿದು, ವಾಹನ ಚಲಾಯಿಸುವಾಗ ನಿಯಮ ಪಾಲಿಸುವಂತೆ ಪಾಲಕರಿಗೂ ತಿಳಿಸಬೇಕು ಎಂದು ಎಸ್ಪಿ ಕೆ.ಎಂ.ಶಾಂತರಾಜು ಹೇಳಿದರು.

ನಗರದ ಬಿ.ಎಚ್.ರಸ್ತೆ ಸರ್ಕಾರಿ ಪಿಯು ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಪೊಲೀಸ್ ಇಲಾಖೆ ಮತ್ತು ಸಮನ್ವಯ ಟ್ರಸ್ಟ್ ಸಹಯೋಗದಲ್ಲಿ ಶನಿವಾರ ಏರ್ಪಡಿಸಿದ್ದ ‘ನಮ್ಮ ಸೇಫ್ಟಿ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಬೈಕ್​ನಲ್ಲಿ ಹೋಗುವಾಗ ಹೆಲ್ಮೆಟ್ ಧರಿಸುವಂತೆ ಪಾಲಕರನ್ನು ಒತ್ತಾಯಿಸಬೇಕು. ರಸ್ತೆ ನಿಯಮ, ಸಿಗ್ನಲ್ ಸೇರಿ ಸುರಕ್ಷತೆ ದೃಷ್ಟಿಯಿಂದ ಇತರೆ ನಿಯಮ ಅನುಸರಿಸಲು ಸೂಚಿಸಬೇಕು. ವಿದ್ಯಾರ್ಥಿಗಳು ಮಾದಕ ವ್ಯಸನದಿಂದ ದೂರ ಉಳಿಯುವ ಮೂಲಕ ಸಾಮಾಜಿಕ ಸ್ವಾಸ್ಥ್ಯ ಕಾಪಾಡಬೇಕು. ದುಶ್ಚಟಗಳ ಜಾಲಕ್ಕೆ ಸಿಲುಕಿಸುವ ವ್ಯಕ್ತಿಗಳಿಂದ ದೂರವಿರಬೇಕು. ಮಾದಕ ವ್ಯಸನಿ ಆಗಿದ್ದಲ್ಲಿ ವೈಯುಕ್ತಿಕ ಜೀವನ ಹಾಳಾಗುವ ಜತೆಯಲ್ಲಿ ಸಾಮಾಜಿಕ ವ್ಯವಸ್ಥೆ ಮೇಲೂ ದುಷ್ಪರಿಣಾಮ ಬೀರುತ್ತದೆ ಎಂದರು.

ಜಿಲ್ಲಾ ಕೌಶಲ ಅಭಿವೃದ್ಧಿ ಇಲಾಖೆ ವ್ಯವಸ್ಥಾಪಕ ಸಮನ್ವಯ ಕಾಶಿ ಮಾತನಾಡಿ, ನಮ್ಮ ಸೇಫ್ಟಿ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಲ್ಲಿ ಮಾದಕ ವ್ಯಸನದ ಪರಿಣಾಮ, ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಸಕಾರಾತ್ಮಕ ಮನೋಭಾವನೆ, ಸಾಮಾಜಿಕ ಕಳಕಳಿ ಕುರಿತಂತೆ ತಿಳಿವಳಿಕೆ ನೀಡಲಾಗುವುದು. ಪ್ರತಿ ಶನಿವಾರ ವಿವಿಧ ಪ್ರೌಢಶಾಲೆಗಳಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ಹೇಳಿದರು.

ಸರ್ಕಾರಿ ಪಿಯು ಕಾಲೇಜಿನ ಪ್ರೌಢಶಾಲಾ ವಿಭಾಗದ ಉಪಪ್ರಾಚಾರ್ಯು ವಿ.ಸುಶೀಲಾ ಅಧ್ಯಕ್ಷತೆ ವಹಿಸಿದ್ದರು. ಸಮನ್ವಯ ಸಂಸ್ಥೆ ಸ್ವಯಂ ಸೇವಕರು ಇದ್ದರು.

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...