

ವಿಟ್ಲ: ಶಾಲಾ ಶಿಕ್ಷಣ ಇಲಾಖೆ ದ.ಕ ಜಿಲ್ಲಾ ಪಂಚಾಯಿತಿ, ಕ್ಷೇತ್ರ ಶಿಕ್ಷಣಾಽಕಾರಿಗಳ ಕಚೇರಿ ಬಂಟ್ವಾಳ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ, ವಿಟ್ಲ ವಲಯ ಕ್ರೀಡಾ ಸಮಿತಿ ವಿಟ್ಠಲ ಎಜುಕೇಶನ್ ಸೊಸೈಟಿ ಆಶ್ರಯದಲ್ಲಿ ವಿಟ್ಲ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ ೨೦೨೪-೨೪ ವಿಟ್ಠಲ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು.
ಕ್ರೀಡಾಕೂಟವನ್ನು ವಿಟ್ಠಲ ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ರಾಧಾಕೃಷ್ಣ ನಾಯಕ್ ಉದ್ಘಾಟಿಸಿದರು. ವಿಟ್ಲ ಜೇಸಿಐ ಘಟಕದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಧ್ವಜಾರೋಹಣ ಮಾಡಿದರು. ಅಧ್ಯಕ್ಷತೆಯನ್ನು ವಿಟ್ಠಲ ಎಜುಕೇಶನ್ ಸೊಸೈಟಿ ಅಧ್ಯಕ್ಷ ಮುಗುಳಿ ತಿರುಮಲೇಶ್ವರ ಭಟ್ ವಹಿಸಿದ್ದರು.
ರೋಟರಿ ಕ್ಲಬ್ ಅಧ್ಯಕ್ಷ ಹರೀಶ್ ಸಿ.ಎಚ್, ಲಯನ್ಸ್ ಕ್ಲಬ್ ಅಧ್ಯಕ್ಷ ರಜಿತ್ ಆಳ್ವ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಶಿವಪ್ರಸಾದ್ ರೈ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಉಮಾನಾಥ ರೈ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಉಪಾಧ್ಯಕ್ಷೆ ಶ್ರೀಮತಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಯತೀಶ್, ಸ್ವಸ್ತಿಕ್ ಫ್ರೆಂಡ್ಸ್ ಅಧ್ಯಕ್ಷ ತಾರಾನಾಥ, ಕುಂಞ ನಾಯ್ಕ, ಶ್ರೀವತ್ಸ, ಶಿಕ್ಷಣ ಸಂಯೋಜಕಿ ಸುಧಾ, ಸಿಆರ್‌ಪಿಗಳಾದ ಬಿಂದು, ಪುಷ್ಪಾ ಮತ್ತು ಚಂದ್ರಶೇಖರ, ವಿಟ್ಠಲ ಎಜುಕೇಶನ್ ಸೊಸೈಟಿ ಕೋಶಾಽಕಾರಿ ಬಾಬು ಕೊಪ್ಪಳ, ಸದಸ್ಯರಾದ ಪದ್ಮಯ್ಯ ಗೌಡ, ರವಿಪ್ರಕಾಶ್, ಸದಾಶಿವ ಬಿ, ಪ್ರಿನ್ಸಿಪಾಲ್ ಆದರ್ಶ ಚೊಕ್ಕಾಡಿ ಉಪಸ್ಥಿತರಿದ್ದರು.
ಉಪಪ್ರಾಂಶುಪಾಲ ಕಿರಣ್ ಕುಮಾರ್ ಬ್ರಹ್ಮಾವರ್ ಸ್ವಾಗತಿಸಿದರು. ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ರಾಜೇಂದ್ರ ರೈ ಪ್ರಸ್ತಾಪಿಸಿದರು. ರಮೇಶ್ ವಂದಿಸಿದರು. ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಪಾಧ್ಯಕ್ಷ ಸುರೇಶ್ ಶೆಟ್ಟಿ ನಿರೂಪಿಸಿದರು.