More

    ವಿದ್ಯಾರ್ಥಿ ವೇತನ ಬಿಡುಗಡೆಗೆ ಒತ್ತಾಯಿಸಿ ಎಬಿವಿಪಿ ಪ್ರತಿಭಟನೆ

    ಚಿತ್ರದುರ್ಗ: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಬಾಕಿ ಇರುವ ವಿದ್ಯಾರ್ಥಿ ವೇತನ ಕೂಡಲೇ ಬಿಡುಗಡೆ ಮಾಡುವಂತೆ ಹಾಗೂ ಹೊಸ ತಂತ್ರಾಂಶ ವನ್ನು(Unified university&college management system)ಸರಿಪಡಿಸಿ ಫಲಿತಾಂಶ ಪ್ರಕಟಿಸ ಬೇಕೆಂದು ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಕಾರ‌್ಯಕರ್ತರು ನಗರದ ಡಿಸಿ ಕಚೇರಿ ಬಳಿ ಗುರುವಾರ ಪ್ರತಿಭಟನೆ ನಡೆಸಿದರು.

    ಲಕ್ಷಾಂತರ ಬಡ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನವನ್ನು ನೆಚ್ಚಿಕೊಂಡಿದ್ದಾರೆ. ಆದರೆ ಈ ಬಾರಿ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಿದ ನಂತರದಲ್ಲಿ ವಿದ್ಯಾರ್ಥಿ ವೇತನ ಬಿಡುಗಡೆಯಾಗಿದೆ ನಮೂದಿಸಲಾಗಿದೆ. ಆದರೆ ಬಹುತೇಕ ವಿದ್ಯಾರ್ಥಿಗಳಿಗೆ ವೇತನ ದೊರೆತಿಲ್ಲ. ಸರ್ಕಾರ ಕೂಡಲೇ ಗಮನ ಹರಿಸಿ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಬೇಕು ಹಾಗೂ ಇದರಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿ ಎಡಿಸಿ ಇ.ಬಾಲಕೃಷ್ಣ ಅವರಿಗೆ ಮನವಿ ಸಲ್ಲಿಸಿದರು.

    ಹೊಸ ತಂತ್ರಾಂಶ ಜಾರಿ ಬಳಿಕ ಪ್ರವೇಶದಿಂದ ಫಲಿತಾಂಶದವರೆಗೆ ಎಲ್ಲ ಮಾಹಿತಿಗಳನ್ನು ಇದರ ಮೂಲಕವೇ ನಮೂದಿಸಬೇಕಾಗಿದೆ. ಆದರೆ ಇದರಲ್ಲಿ ಕೆಲ ತಾಂತ್ರಿಕ ಸಮಸ್ಯೆಗಳಿಂದಾಗಿ,ಹಾಸ್ಟೆಲ್‌ಗೆ ಅರ್ಜಿ ಸಲ್ಲಿಸಲು,ಬೇರೆ ಕಾಲೇಜಿಗೆ ವರ್ಗಾವಣೆ ಪಡೆಯಲು, ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ತೊಂದರೆಉಂಟಾಗಿದೆ.

    ವಿಶ್ವವಿದ್ಯಾಲಯಗಳು ಸರಿಯಾದ ರೀತಿಯಲ್ಲಿ ಫಲಿತಾಂಶ ನೀಡದೆ ಇರುವುದರಿಂದ ವಿದ್ಯಾರ್ಥಿಗಳು ನಾನಾ ಸಮಸ್ಯೆಗಳನ್ನು ಎದುರಿಸು ವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಪರಿಷತ್ ವಿಭಾಗೀಯ ಸಂಚಾಲಕ ಆದರ್ಶ,ಸಿದ್ದೇಶ್,ಸುದರ್ಶನ್ ನಾಯ್ಕ, ಗೋಪಿ, ಅವಿನಾಶ್,ಸೌಂದರ್ಯ,ಲಕ್ಷ್ಮೀ ಮತ್ತಿತರರು ಪ್ರತಿಭಟನೆಯಲ್ಲಿ ಇದ್ದರು.

    Array

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts