More

  ವಿದ್ಯಾರ್ಥಿ ವೇತನ ಜಾಗೃತಿ ಜಾಥಾಗೆ ಚಾಲನೆ

  ಚಾಮರಾಜನಗರ : ರಾಷ್ಟ್ರೀಯ ಐಕ್ಯತಾ ಸಪ್ತಾಹ ಹಾಗೂ ದುರ್ಬಲ ವರ್ಗಗಳ ದಿನ ಮತ್ತು ಜನ ಜಾತಿಯ ಗೌರವ ದಿವಸ್ ಅಂಗವಾಗಿ ಜಿಲ್ಲಾ ಪಂಚಾಯತ್, ಕೊಳ್ಳೇಗಾಲ ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಪಟ್ಟಣದ ತಾಲೂಕು ಕಚೇರಿಯಲ್ಲಿ ಬುಧವಾರ ವಿದ್ಯಾರ್ಥಿವೇತನ ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.


  ಈ ವೇಳೆ ತಹಶೀಲ್ದಾರ್ ಮಂಜುಳಾ ಅವರು ಗಿರಿಜನ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯದ ಮಕ್ಕಳಿಗೆ ರಾಷ್ಟ್ರೀಯ ಐಕ್ಯತಾ ಸಪ್ತಾಹದ ಪ್ರಮಾಣ ವಚನ ಬೋಧಿಸಿದರು. ಬಳಿಕ ಹಸಿರು ನಿಶಾನೆ ತೋರುವ ಮೂಲಕ ಜಾಥಾಕ್ಕೆ ಚಾಲನೆ ನೀಡಿದರು.


  ಈ ವೇಳೆ ಮಾತನಾಡಿದ ಅವರು, ರಾಷ್ಟ್ರದ ಸ್ವಾತಂತ್ರೃ ಹಾಗೂ ಐಕ್ಯತೆಯನ್ನು ಬಲಪಡಿಸಲು ಮತ್ತು ದೇಶದಲ್ಲಿ ಹಿಂಸಾಚಾರ ಕೋಮು ದ್ವೇಷವನ್ನು ತಡೆಗಟ್ಟುವುದಕ್ಕಾಗಿ ರಾಷ್ಟ್ರೀಯ ಐಕ್ಯತಾ ಸಪ್ತಾಹವನ್ನು ನಡೆಸಲಾಗುತ್ತಿದೆ. ಈ ಹಿನ್ನೆಲೆ ಒಂದು ವಾರ ಪ್ರತಿದಿನ ಒಂದೊಂದು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.


  ನಂತರ, ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಜಾಥಾ ಸಾಗಿತು. ನಿಲಯದ ವಿದ್ಯಾರ್ಥಿಗಳು ಮಾಹಿತಿ ಫಲಕಗಳನ್ನು ಹಿಡಿದು ಜಾಥಾಸಾಗಿ ರಾಷ್ಟ್ರೀಯ ಐಕ್ಯತಾ ಸಪ್ತಾಹ ಜಾಗೃತಿ ಮೂಡಿಸಿದರು.


  ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ನವೀನ ಸಿ.ಮಠದ್, ಸಮಾಜ ಕಲ್ಯಾಣ ಇಲಾಖೆಯ ತಾತ್ಕ್ಕಾಲಿಕ ಸಹಾಯಕ ನಿರ್ದೇಶಕ ಕೇಶವಮೂರ್ತಿ ಮತ್ತಿತರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts