ಕಿನ್ನಿಗೋಳಿ: ಯುವತಿಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕರ್ನಿರೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಪವಿತ್ರಾ (21) ಎಂದು ಗುರುತಿಸಲಾಗಿದೆ.

ನಗರದ ಖಾಸಗಿ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದು, ಕರ್ನಿರೆ ಹಾಲಿನ ಡೇರಿ ಪಕ್ಕದ ಬಾಡಿಗೆ ಮನೆಯಲ್ಲಿ ಪವಿತ್ರಾ ಮನೆಯವರು ವಾಸಿಸುತ್ತಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.