ಭಾವಿ ನಾಯಕತ್ವಕ್ಕೆ ಬಾಲ್ಯ ಬುನಾದಿ : ವಿದ್ಯಾರ್ಥಿ ಸಂಘ ಉದ್ಘಾಟಿಸಿ ಶಿಕ್ಷಕ ಪ್ರವೀಣ್ ಅನಿಸಿಕೆ

amrutha
ಅಮೃತ ಭಾರತಿ ವಿದ್ಯಾಕೇಂದ್ರದಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು
Published on

ಹೆಬ್ರಿ: ವಿದ್ಯಾರ್ಥಿಗಳು ನಾಯಕತ್ವ ಮೈಗೂಡಿಸಿಕೊಂಡರೆ ಭಾವಿ ನಾಯಕತ್ವಕ್ಕೆ ದಾರಿದೀಪವಾಗುತ್ತದೆ. ಮಕ್ಕಳು ಭತ್ತ ತುಂಬುವ ಚೀಲಗಳಾಗದೆ ಭತ್ತ ಬೆಳೆಯುವ ಗದ್ದೆಗಳಾಗಬೇಕು ಎಂದು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಸಮಾಜಶಾಸ್ತ್ರ ಶಿಕ್ಷಕ ಪ್ರವೀಣ್ ಶೆಟ್ಟಿ ಹೇಳಿದರು. ಅಮೃತ ಭಾರತಿ ವಿದ್ಯಾಕೇಂದ್ರದಲ್ಲಿ ಇತ್ತೀಚೆಗೆ ವಿದ್ಯಾರ್ಥಿ ಸಂಘವನ್ನು ಉದ್ಘಾಟಸಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಟ್ರಸ್ಟ್ ಕಾರ್ಯದರ್ಶಿ ಗುರುದಾಸ್ ಶೆಣೈ, ವಿದ್ಯಾರ್ಥಿ ನಾಯಕರಿಗೆ ಪ್ರಮಾಣವಚನ ಬೋಧಿಸಿದರು. ಬಳಿಕ ಕರ್ತವ್ಯಗಳ ಕುರಿತು ಮಾಹಿತಿ ನೀಡಿದರು. ವಿದ್ಯಾರ್ಥಿ ಸಂಘದ ನಾಯಕನಾಗಿ ಶ್ರೀರಾಂ ಬಡಜೆ ಹಾಗೂ ಉಪನಾಯಕಿಯಾಗಿ ಸಾನ್ವಿ ಕೆ. ಆಯ್ಕೆಯಾದರು. ಪ್ರಾಂಶುಪಾಲ ಎಚ್.ಅರುಣ್, ಮುಖ್ಯಶಿಕ್ಷಕಿ ಅನಿತಾ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net