

ಸುಬ್ರಹ್ಮಣ್ಯ: ಗ್ರಾಮೀಣ ವಿದ್ಯಾರ್ಥಿಗಳ ಉನ್ನತಿಗೆ ಪ್ರೋತ್ಸಾಹ ಅತ್ಯಗತ್ಯ. ವಿದ್ಯೆ ಜೀವನದ ಅವಿಭಾಜ್ಯ ಅಂಗ. ವಿದ್ಯಾರ್ಥಿ ಸಂಗಳು ಯುವಜನಾಂಗಕ್ಕೆ ನಾಯಕತ್ವದ ಜ್ಞಾನವನ್ನು ಬೋಧಿಸುವ ಪುಸ್ತಕಗಳಾಗಿವೆ ಎಂದು ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಅಶೋಕ್ ನೆಕ್ರಾಜೆ ಹೇಳಿದರು.
ಎಸ್ಎಸ್ಪಿಯು ಕಾಲೇಜಿನ ಬೆಳ್ಳಿಹಬ್ಬ ಸಭಾಂಗಣದಲ್ಲಿ ಶನಿವಾರ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ 2025-26ನೇ ಸಾಲಿನ ವಿದ್ಯಾರ್ಥಿ ಸಂಘ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪತ್ರಕರ್ತ ದುರ್ಗಾಕುಮಾರ್ ನಾಯರ್ಕೆರೆ ಸಮಾರಂಭವನ್ನು ಉದ್ಘಾಟಿಸಿದರು. ಜಿಲ್ಲಾ ಧಾರ್ಮಿಕ ಪರಿಷತ್ ಮಾಜಿ ಸದಸ್ಯೆ ವಿಮಲಾ ರಂಗಯ್ಯ, ಗ್ರಾಪಂ ಸದಸ್ಯೆ ಭಾರತಿ ದಿನೇಶ್, ಕೆಎಸ್ಎಸ್ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಉದಯಕುಮಾರ್ ಮುಖ್ಯ ಅತಿಥಿಗಳಾಗಿದ್ದರು. ಪ್ರಾಚಾರ್ಯ ಸೋಮಶೇಖರ ನಾಯಕ್, ಸಾಂಸ್ಕೃತಿಕ ಸಂಘ ಸಂಚಾಲಕಿ ರೇಖಾರಾಣಿ ಸೋಮಶೇಖರ್, ವಿದ್ಯಾರ್ಥಿ ಸರ್ಕಾರದ ಸಂಚಾಲಕ ಜಯಪ್ರಕಾಶ್ ಆರ್. ಮೊದಲಾದವರಿದ್ದರು. ವಿದ್ಯಾರ್ಥಿನಿ ರಕ್ಷಾ ಸ್ವಾಗತಿಸಿದರು. ಪೂಜಾಶ್ರಿ ನಿರೂಪಿಸಿದರು. ಉಪನ್ಯಾಸಕಿ ಶ್ರುತಿ ಅಶ್ವತ್ಥ್ ಸಹಕರಿಸಿದರು. ಯಶಸ್ವಿ ವಂದಿಸಿದರು.