ಕಾಲೇಜಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು! ಶಿಕ್ಷಕನ ಕಿರುಕುಳವೇ ಕಾರಣವಾಯ್ತಾ!| Suicide

dk - 2025-07-15T101957.619
Published on: 

ಒಡಿಸ್ಸಾ: ದೀರ್ಘಕಾಲದ ಲೈಂಗಿಕ ಕಿರುಕುಳವನ್ನು ಸಹಿಸಿಕೊಂಡ ಆರೋಪದ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಒಡಿಶಾದ ಮಹಿಳಾ ಕಾಲೇಜು ವಿದ್ಯಾರ್ಥಿನಿ ಸೋಮವಾರ ರಾತ್ರಿ ಭುವನೇಶ್ವರದ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್)ಯಲ್ಲಿ ಮೃತಪಟ್ಟಿದ್ದಾಳೆ.

ಬಾಲಸೋರ್‌ನ ಫಕೀರ್ ಮೋಹನ್ ಸ್ವಾಯತ್ತ ಕಾಲೇಜಿನಲ್ಲಿ ಬಿ.ಎಡ್. ವ್ಯಾಸಂಗ ಮಾಡುತ್ತಿದ್ದ 20 ವರ್ಷದ ಯುವತಿ, ವಿಭಾಗದ ಮುಖ್ಯಸ್ಥರು ಪದೇ ಪದೇ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ದೂರು ನೀಡಿದ್ದರೂ ಪ್ರಾಂಶುಪಾಲರು ಮತ್ತು ಕಾಲೇಜು ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದ ಕಾರಣ ಕ್ಯಾಂಪಸ್‌ನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವರದಿಯಾಗಿದೆ.

ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರು ಘಟನೆಗೆ ತೀವ್ರ ದುಃಖ ವ್ಯಕ್ತಪಡಿಸಿದ್ದು, ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

"ಎಫ್‌ಎಂ ಸ್ವಾಯತ್ತ ಕಾಲೇಜಿನ ವಿದ್ಯಾರ್ಥಿನಿ ನಿಧನದ ಸುದ್ದಿ ಕೇಳಿ ನನಗೆ ತುಂಬಾ ದುಃಖವಾಯಿತು. ಸರ್ಕಾರವು ಎಲ್ಲಾ ಜವಾಬ್ದಾರಿಗಳನ್ನು ಪೂರೈಸಿದರೂ ಮತ್ತು ತಜ್ಞ ವೈದ್ಯಕೀಯ ತಂಡದ ಅವಿಶ್ರಾಂತ ಪ್ರಯತ್ನಗಳ ಹೊರತಾಗಿಯೂ, ಸಂತ್ರಸ್ತೆಯ ಜೀವವನ್ನು ಉಳಿಸಲು ಸಾಧ್ಯವಾಗಲಿಲ್ಲ." ಎಂದು ಎಕ್ಸ್‌ನಲ್ಲಿ ಸಿಎಂ ಪೋಸ್ಟ್ ಮಾಡಿದ್ದಾರೆ.

ಶನಿವಾರ(ಜು.12) ಕಾಲೇಜು ಪ್ರಾಂಶುಪಾಲರನ್ನು ಭೇಟಿಯಾದ ಸ್ವಲ್ಪ ಸಮಯದ ನಂತರ ಮಹಿಳೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ ಮಾಡಿದ್ದಳು. ಶೇ.90ರಷ್ಟು ದೇಹ ಸುಟ್ಟಿತ್ತು. ಇದೀಗ ಸೋಮವಾರ ತಡರಾತ್ರಿ ಮೃತಪಟ್ಟಿದ್ದಾರೆ.(ಏಜೆನ್ಸೀಸ್​)