More

    ನಮಗೆ ದೇವಾಲಯದ ತೀರ್ಥಪ್ರಸಾದ ಬೇಡ, ಉನ್ನತ ಶಿಕ್ಷಣಕ್ಕಾಗಿ ಬಸ್ ಬೇಕು; ಸಿಎಂ ಪತ್ರ ಬರೆದ ವಿದ್ಯಾರ್ಥಿನಿ

    ಬೆಂಗಳೂರು: ನಮಗೆ ದೇವಾಲಯದ ತೀರ್ಥಪ್ರಸಾದ ಬೇಡ, ನಮಗೆ ಉನ್ನತ ಶಿಕ್ಷಣಕ್ಕಾಗಿ ಸಂಸ್ಥೆಯ ಸಾರಿಗೆ ವಾಹನಗಳು ಬೇಕಾಗಿದೆ ಎಂದು ಎಂಟನೇ ತರಗತಿಯ ವಿದ್ಯಾರ್ಥಿಯೊಬ್ಬಳು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿದ್ದಾಳೆ.

    ನಗರದಿಂದ ಸುಮಾರು 25 ಕಿಲೋಮಿಟರ್ ದೂರದಲ್ಲಿರುವ ತಾವರೆಕೆರೆ ವ್ಯಾಪ್ತಿಯ ಸೀಗೇಹಳ್ಳಿಯಿಂದ ಬೆಂಗಳೂರಿಗೆ ಸರಿಯಾದ ಸಾರಿಗೆ ಬಸ್ ವ್ಯವಸ್ಥೆ ಇಲ್ಲದಿರುವ ಬಗ್ಗೆ ಬಾಲಕಿಯೊಬ್ಬಳು ಪತ್ರದ ಮೂಲಕ ಮುಖ್ಯಮಂತ್ರಿ ಅವರ ಗಮನ ಸೆಳೆಯಲು ಯತ್ನಿಸಿದ್ದಾಳೆ.

    ಪತ್ರದಲ್ಲೇನಿದೆ?

    ಸ್ವಾಮಿ, ನಾನು ಕುಮಾರಿ ವಿ.ವೈ.ಹರ್ಷಿನಿ, 8ನೇ ತರಗತಿ ವಿದ್ಯಾರ್ಥಿನಿ. ನಾನು ಮತ್ತು ನನ್ನ ತಾಯಿ ಹಲವು ಬಾರಿ ತಮ್ಮ ಸಂಸ್ಥೆಯ ಅಧಿಕಾರಿಗಳಿಗೆ ತಾವರೆಕೆರೆಯಿಂದ ಮಾಗಡಿ ರಸ್ತೆಯ ಮುಖಾಂತರ ಶ್ರೀನಗರ ಬಸ್ ನಿಲ್ದಾಣಕ್ಕೆ ಸಾರಿಗೆ ಸಂಸ್ಥೆಯ ಬಸ್ ಬಿಡಬೇಕೆಂದು ಮನವಿ ಮಾಡಿಕೊಂಡಿದ್ದೇವೆ. ಈ ಪತ್ರಕ್ಕೆ ಸಂಸ್ಥೆಯ ಅಧಿಕಾರಿಗಳು ಯಾವುದೇ ಉತ್ತರವನ್ನು ನೀಡಿರುವುದಿಲ್ಲ. ಆದರೆ, ಪ್ರತಿ ಗುರುವಾರ ಹಾಗೂ ಭಾನುವಾರ ಸುಮ್ಮನಹಳ್ಳಿಯಿಂದ ಕಡಬಗೆರೆ ಮಾರ್ಗವಾಗಿ ರಾಯರ ಕಾಮದೇನು ದೇವಾಲಯಕ್ಕೆ ಪ್ರತಿ ಗಂಟೆಗೆ ಬಸ್ ಬಿಡಲಾಗುತ್ತಿದೆ.

    letter To cm

    ಇದನ್ನೂ ಓದಿ: ಮಮತಾ ಬ್ಯಾನರ್ಜಿ ಈಗ ಆಂಟಿ ಆಗಿದ್ದಾರೆ, ಅವರನ್ನು ದೀದಿ ಎನ್ನಬೇಡಿ: ಸುವೇಂದು ಅಧಿಕಾರಿ

    ನಮಗೆ ದೇವಾಲಯದ ತೀರ್ಥಪ್ರಸಾದ ಬೇಡ, ನಮಗೆ ಉನ್ನತ ಶಿಕ್ಷಣಕ್ಕಾಗಿ ಸಂಸ್ಥೆಯ ಸಾರಿಗೆ ವಾಹನಗಳು ಬೇಕಾಗಿದೆ. ಈ ದೇಶದ ರಾಷ್ಟ್ರಪತಿ ಮಹಿಳೆ. ಇಂದಿನ ದಿನಗಳಲ್ಲಿ ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ಮತ್ತು ಸುರಕ್ಷಿತ ಸಿಗುವಂತೆ ಮಾಡಿರುವುದು ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶೀರ್ವಾದ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಹೆಸರಿನಲ್ಲಿ ಶಾಲಾ ಮಕ್ಕಳಿಗೆ ಪ್ರತಿ ಜಿಲ್ಲೆ ಮತ್ತು ತಾಲೂಕು ಹಳ್ಳಿಯ ಶಾಲಾ ಮಕ್ಕಳಿಗೆ ವಿಶೇಷ ಸಾರಿಗೆ ಬಸ್​ಗಳನ್ನು ಆರಂಭಿಸಬೇಕು ಎಂದು ವಿದ್ಯಾರ್ಥಿನಿ ಪತ್ರದ ಮೂಲಕ ಮನವಿ ಮಾಡಿದ್ದಾಳೆ.

    ವಿದ್ಯಾರ್ಥಿನಿ ಈ ಪತ್ರವನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಮಾತ್ರವಲ್ಲದೆ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಬಿಎಂಟಿಸಿ ಎಂಡಿ ರಾಮಚಂದ್ರನ್ ಅವರಿಗೆ ಕಳುಹಿಸಿದ್ದಾಳೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts