ಆಸಕ್ತಿಯ ಕ್ಷೇತ್ರದಲ್ಲೇ ವಿದ್ಯಾರ್ಥಿಗಳು ಸಾಧಿಸಿ

blm (1)
Published on

ಶಿರ್ವ: ವಿದ್ಯಾರ್ಥಿಗಳು ತಮ್ಮ ಆಸಕ್ತಿಯ ಕ್ಷೇತ್ರದ ಮೇಲೆ ಗಮನ ಕೇಂದ್ರೀಕರಿಸಿ ಸಾಧನೆ ಮಾಡಬೇಕು. ಕಲಿಕೆಯ ಹಂತದಲ್ಲೇ ಅಚಲ ಗುರಿಯನ್ನಿಟ್ಟುಕೊಂಡು ಮುನ್ನಡೆದರೆ ಬದುಕಿನಲ್ಲಿ ಸಾರ್ಥಕತೆ ದೊರೆಯುತ್ತದೆ ಎಂದು ಉಡುಪಿ ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು. ಬಂಟಕಲ್ಲು ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಭಾನುವಾರ ಆಯೋಜನೆಗೊಂಡ ಪ್ರಸಕ್ತ ಸಾಲಿನ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳ ವಾರ್ಗದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಬೆಂಗಳೂರಿನ ಲೀಪ್ ಫ್ರಾಗ್ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ ಸಂಸ್ಥೆಯ ಮುಖ್ಯಸ್ಥ ಪ್ರಭವ್ ಎನ್.ರಾವ್ ಶುಭಹಾರೈಸಿದರು. ಸಿಇಟಿಯಲ್ಲಿ ರ‌್ಯಾಂಕ್ ಪಡೆದ ವಿದ್ಯಾಸಂಸ್ಥೆಯ ಮೂವರು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನದ ಉಪಾಧ್ಯಕ್ಷ ಪಿ.ಶ್ರೀನಿವಾಸ ತಂತ್ರಿ, ಕಾರ್ಯದರ್ಶಿ ರತ್ನಕುವಾರ್, ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಡಾ.ರಾಧಾಕಷ್ಣ ಎಸ್ ಐತಾಳ್, ಪ್ರಾಂಶುಪಾಲ ಡಾ.ತಿರುಮಲೇಶ್ವರ ಭಟ್, ಪ್ರಮುಖರಾದ ಡಾ.ನಾಗರಾಜ್ ಭಟ್, ಹರೀಶ್ ಬೆಳ್ಮಣ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಮತ್ತು ಸಂಸ್ಥೆಯ ಡೀನ್‌ಗಳು ಮತ್ತಿತರರು ಉಪಸ್ಥಿತರಿದ್ದರು. ಡಾ.ಸುಬ್ಬುಲಕ್ಷ್ಮೀ ಎನ್.ಕಾರಂತ್ ಸ್ವಾಗತಿಸಿದರು. ಡಾ.ಲೊಲಿಟ ಪ್ರಿಯ ಕ್ಯಾಸ್ತಲಿನೊ ವಂದಿಸಿದರು. ಕಾರ್ತಿಕ್ ಮತ್ತು ಆಶ್ರಿತಾ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net