ಪೊಲೀಸ್​ ಎದುರೇ ಹಲ್ಲೆ ಮಾಡಲು ಮುಂದಾದ ವಿದ್ಯಾರ್ಥಿಗಳು! ದ.ಕ ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಗೂಂಡಾಗಿರಿ…

bus galate
Published on

ಮಂಗಳೂರು: ದ.ಕ ಜಿಲ್ಲೆ ಬೆಳ್ತಂಗಡಿಯ ಚಾರ್ಮಾಡಿಯಲ್ಲಿ ಬಸ್​ ನಿಲ್ಲಿಸಲಿಲ್ಲ ಎಂದು ವಿದ್ಯಾರ್ಥಿಗಳು ದಾಂಧಲೆ ನಡೆಸಿದ್ದಾರೆ.

ಸಂಜೆ ಕಾಲೇಜಿನಿಂದ ವಾಪಸ್​ ತೆರಳುತ್ತಿದ್ದ ವಿದ್ಯಾರ್ಥಿಗಳು ಉಜಿರೆಯಿಂದ ಬಸ್​ ಹತ್ತಿದ್ದಾರೆ. ಇವರು ಚಾರ್ಮಾಡಿಯಲ್ಲಿ ಇಳಿಯಬೇಕಾಗಿತ್ತು. ಹೀಗಾಗಿ ಚಾರ್ಮಾಡಿ ಬಳಿ ಬಸ್ ನಿಲ್ಲಿಸಲು ವಿದ್ಯಾರ್ಥಿಗಳು ಸೂಚಿಸಿದ್ದಾರೆ.

ಆದರೆ ವೇಗದೂತ ಬಸ್ ಆಗಿರುವ ಕಾರಣ ಸಿಕ್ಕಸಿಕ್ಕಲ್ಲಿ ಬಸ್ ನಿಲ್ಲಿಸಲು ಸಾಧ್ಯವಿಲ್ಲ ಎಂದು ನಿರ್ವಾಹಕರು ಹೇಳಿದ್ದಾರೆ. ಈ ವೇಳೆ ವಿದ್ಯಾರ್ಥಿಗಳು ಮತ್ತು ಕಂಡೆಕ್ಟರ್ ನಡುವೆ ವಾಗ್ವಾದ ನಡೆದಿದೆ. ಆಗ ಕಂಡೆಕ್ಟರ್ ಮಾತಿಗೆ ಬೆಂಬಲ ಸೂಚಿಸಿದ ಬಸ್​ನಲ್ಲಿದ್ದ ಪ್ರಯಾಣಿಕನ ಮೇಲೆ ವಿದ್ಯಾರ್ಥಿಗಳು ಮುಗಿಬಿದ್ದಿದ್ದಾರೆ.

ಪೊಲೀಸರ ಎದುರೇ ಹಲ್ಲೆಗೆ ಮುಂದಾದರು!

ನಂತರ ಬಸ್​ನಲ್ಲಿದ್ದ ವಿದ್ಯಾರ್ಥಿಗಳು ಬೇರೆ ಯುವಕರನ್ನು ಕರೆಸಿ ಬಸ್ ಅಡ್ಡ ಹಾಕಿಸಿ ದಾಂಧಲೆ ನಡೆಸಿದ್ದಾರೆ. ಈ ಸಂದರ್ಭ ಸ್ಥಳಕ್ಕಾಗಮಿಸಿದ ಪೊಲೀಸ್​ ಒಬ್ಬರು ಪರಿಸ್ಥಿತಿಯನ್ನು ತಿಳಿಗೊಳಿಸಲು ಪ್ರಯತ್ನಿಸಿದ್ದಾರೆ. ಆದರೆ ಈ ಪುಂಡರು, ಪೊಲೀಸರ ಎದುರೇ ದಾಂಧಲೆ ಮಾಡಿ ಮಹಿಳೆಯರ ಎದುರೇ ಅವ್ಯಾಚ್ಯ ಶಬ್ದಗಳಿಂದ ಪ್ರಯಾಣಿಕನಿಗೆ ನಿಂದಿದ್ದಾರೆ.

ಅಷ್ಟೇ ಅಲ್ಲದೇ ಪೊಲೀಸರ ಎದುರೇ ವ್ಯಕ್ತಿಯೋರ್ವನಿಗೆ ಹಲ್ಲೆ ಕೂಡ ಮಾಡಿದ್ದಾರೆ. ವಿದ್ಯಾರ್ಥಿಗಳಿಂದ ಗೂಂಡಾಗಿರಿ ನಡೆದರೂ ಪೊಲೀಸರು ಸುಮ್ಮನಾಗಿದ್ದಾರೆ ಎನ್ನಲಾಗಿದೆ.

ಈ ಸಂದರ್ಭ ವಿದ್ಯಾರ್ಥಿಗಳ ಗೂಂಡಾಗಿರಿ ದೃಶ್ಯವನ್ನು ಮೊಬೈಲ್​ನಲ್ಲಿ ಬಸ್ ಪ್ರಯಾಣಿಕರು ಚಿತ್ರೀಕರಿಸಿದ್ದಾರೆ. ಈ ಘಟನೆಯ ಕುರಿತು ಈವರೆಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net