More

    ವಿದ್ಯಾರ್ಥಿಗಳು ವೃತ್ತಿ ಕೌಶಲ ಅಭಿವೃದ್ಧಿಪಡಿಸಿಕೊಳ್ಳಿ

    ಬೆಳಗಾವಿ: ವಿದ್ಯಾರ್ಥಿಗಳ ಪ್ರತಿಭೆಗೆ ತಕ್ಕಂತೆ ಕಂಪನಿಗಳು ಉದ್ಯೋಗಾವಕಾಶ ಕಲ್ಪಿಸಬೇಕು. ಅವರೂ ವೃತ್ತಿ ಕೌಶಲ ಅಭಿವೃದ್ಧಿಪಡಿಸಿಕೊಂಡು ಉತ್ತಮ ಬದುಕು ರೂಪಿಸಿಕೊಳ್ಳಬೇಕು ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ
    ಪ್ರೊ. ಎಂ.ರಾಮಚಂದ್ರಗೌಡ ಸಲಹೆ ನೀಡಿದರು.

    ನಗರದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ರಾಣಿ ಚನ್ನಮ್ಮ ವಿವಿ ಉದ್ಯೋಗ ಕೋಶದ ಆಶ್ರಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿ ಮಾತನಾಡಿದರು. ಉದ್ಯೋಗ ವಿನಿಮಯ ಕಚೇರಿ ಸಹಾಯಕ ನಿರ್ದೇಶಕ ಗುರುಪಾದಯ್ಯ ಹಿರೇಮಠ ಮಾತನಾಡಿ, ಕರೊನಾ ಹಿನ್ನೆಲೆಯಲ್ಲಿ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ. ಹೀಗಾಗಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಮೇಳ ಆಯೋಜಿಸಿದ್ದೇವೆ ಎಂದರು. ಪ್ರಾಚಾರ್ಯ ಡಾ. ಎಂ.ಜಯಪ್ಪ ಅಧ್ಯಕ್ಷತೆ ವಹಿಸಿದ್ದರು.

    ಕುಲಸಚಿವ ಪ್ರೊ.ಬಸವರಾಜ ಪದ್ಮಶಾಲಿ, ಉದ್ಯೋಗ ಕೋಶದ ಅಧಿಕಾರಿ ಡಾ. ಆರ್.ಎನ್.ಮನಗುಳಿ, ಸಹಾಯಕ ಉದ್ಯೋಗಾಧಿಕಾರಿ ಗದ್ದಪ್ಪ ಕೋರಸಗಾಂವ, ಮಹೇಶ ಮಾರವಾಡಕರ ಉಪಸ್ಥಿತರಿದ್ದರು. ಉಪಪ್ರಾಚಾರ್ಯ ಅನಿಲ ರಾಮದುರ್ಗ ವಂದಿಸಿದರು. ಡಾ. ಜ್ಯೋತಿ ಬಿರಾದರ ನಿರೂಪಿಸಿದರು. ಮೇಳದಲ್ಲಿ 25 ಪ್ರತಿಷ್ಠಿತ ಕಂಪನಿಗಳು ಪಾಲ್ಗೊಂಡಿದ್ದು, 1,500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದರು. ಈ ಪೈಕಿ 156 ಮಂದಿ ವಿವಿಧ ಕಂಪನಿಗಳಿಗೆ ಆಯ್ಕೆಯಾದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts