More

    ಕ್ರಿಯಾಶೀಲತೆ, ಕೌಶಲಗಳನ್ನು ಬೆಳೆಸಿಕೊಳ್ಳಿ

    ಶನಿವಾರಸಂತೆ: ವಿದ್ಯಾರ್ಥಿಗಳು ಸ್ವಂತಿಕೆ, ಕ್ರಿಯಾಶೀಲತೆ, ಕೌಶಲಗಳನ್ನು ಬೆಳೆಸಿಕೊಂಡರೆ ಭವಿಷ್ಯದಲ್ಲಿ ಸಾಧನೆ ಮಾಡಲು ಸಹಕಾರಿಯಾಗುತ್ತದೆ ಎಂದು ಸಾಫ್ಟ್‌ವೇರ್ ಇಂಜಿನಿಯರ್ ನಾಗೇಂದ್ರ ಅಭಿಪ್ರಾಯಪಟ್ಟರು.


    ಸಮೀಪದ ಕೊಡ್ಲಿಪೇಟೆ ಹಲಸಿನಮರ ಗೌರಮ್ಮ ಶಾಂತಮಲ್ಲಪ್ಪ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ವಾಣಿಜ್ಯ ಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ತಯಾರಿಸಿದ್ದ ವಿವಿಧ ವಾಣಿಜ್ಯ ನವೀನ ಮಾದರಿಗಳ ವಸ್ತುಪ್ರದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿದ್ಯಾರ್ಥಿಗಳು ಪಠ್ಯದೊಂದಿಗೆ ಕ್ರಿಯಾಶೀಲತೆಗೆ ಪೂರಕವಾಗುವಂತಹ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ವಾಣಿಜ್ಯ ಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ವಾಣಿಜ್ಯೋದ್ಯಮ ಕ್ಷೇತ್ರಕ್ಕೆ ಸಂಬಂಧಿಸಿದ ನವೀನ ಮಾದರಿಗಳನ್ನು ತಯಾರಿಸುವುದರಿಂದ ಸ್ವಂತಿಕೆ, ಕ್ರಿಯಾಶೀಲತೆ ಮತ್ತು ಕೌಶಲ ಅಭಿವೃದ್ಧಿಗೊಳ್ಳುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ವಸ್ತುಪ್ರದರ್ಶನ ಆಯೋಜಿಸಿರುವುದು ಶ್ಲಾಘನೀಯ ಎಂದರು.


    ಪ್ರಾಂಶುಪಾಲ ಎಂ.ಆರ್.ನಿರಂಜನ್ ಮಾತನಾಡಿ, ವಿದ್ಯಾರ್ಥಿಗಳಲ್ಲಿರುವ ಕೌಶಲ, ಪ್ರತಿಭೆಗಳನ್ನು ಗುರುತಿಸುವ ಸಲುವಾಗಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ ಎಂದು ಹೇಳಿದರು.


    ಸಾಫ್ಟ್‌ವೇರ್ ಇಂಜಿನಿಯರ್ ಸುಭ ನಾಗೇಂದ್ರ, ವಿದ್ಯಾಸಂಸ್ಥೆ ಕಾರ್ಯದರ್ಶಿ ಕೆ.ಎಸ್.ಪರಮೇಶ್, ನಿರ್ದೇಶಕ ಬಿ.ಕೆ.ಯತೀಶ್, ಉಪನ್ಯಾಸಕಿ ಶ್ರೇಯಾ ಸುಹಾಸ್ ಇದ್ದರು. ವಿದ್ಯಾರ್ಥಿಗಳು ರಾಷ್ಟ್ರೀಯ ಬ್ಯಾಂಕ್, ಪೆಟ್ರೋಲ್ ಬಂಕ್ ಮುಂತಾದ ವಾಣಿಜ್ಯೋದ್ಯಮ ನವೀನ ಮಾದರಿಗಳನ್ನು ತಯಾರಿಸಿ ಪ್ರದರ್ಶಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts