

ಚಾಮರಾಜನಗರ: ಹಾಸ್ಟೆಲ್ ಊಟ ಸೇವಿಸಿ ಮಕ್ಕಳು ಅಸ್ವಸ್ಥರಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರಿನಲ್ಲಿ ನಡೆದಿದೆ.
ಬೇಗೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು ನಿನ್ನೆ ರಾತ್ರಿ ಹಾಸ್ಟೆಲ್ ನಲ್ಲಿ ಮಾಡಿದ್ದ ಚಿಕನ್ ಸಾಂಬಾರ್ ಊಟ ಮಾಡಿದ ನಂತರ ಅಸ್ವಸ್ಥರಾಗಿದ್ದಾರೆ. ರಾತ್ರಿಯಿಂದ 15 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದು, ಸದ್ಯ ಬೇಗೂರು ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ.