More

    1ರಿಂದ 8ನೇ ತರಗತಿ ವರೆಗಿನ ಮಕ್ಕಳಿಗೆ ಪರೀಕ್ಷೆ ಇಲ್ಲದೆ ಪಾಸ್​: ಹಾಗಂತ ಕರ್ನಾಟಕದ ಮಕ್ಕಳು ಖುಷಿಯಾಗುವಂತಿಲ್ಲ

    ಮುಂಬೈ: ಕರ್ನಾಟಕದಲ್ಲಿ ಈ ಹಿಂದೆ ಒಮ್ಮೆ ಮಕ್ಕಳಿಗೆ ಪರೀಕ್ಷೆ ಇಲ್ಲದೆ ಪಾಸ್ ಮಾಡಲಾಗುವುದು ಎಂಬ ಸುದ್ದಿ ಹರಿದಾಡಿತ್ತು. ಬಳಿಕ ಅಂಥ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಆ ಕುರಿತು ಇನ್ನೂ ಚರ್ಚೆಗಳು ನಡೆಯುತ್ತಿವೆ, ಸದ್ಯಕ್ಕೆ ಪರೀಕ್ಷೆ ಇಲ್ಲದೆ ಪಾಸ್ ಮಾಡುವ ನಿರ್ಣಯ ತೆಗೆದುಕೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್​. ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದರು.

    1ರಿಂದ 8ನೇ ತರಗತಿ ವರೆಗಿನ ಮಕ್ಕಳನ್ನು ಪರೀಕ್ಷೆ ಇಲ್ಲದೆ ಪಾಸ್​ ಮಾಡಲಾಗುವುದು ಎಂಬ ಸುದ್ದಿ ಇದೀಗ ಹೊರಬಿದ್ದಿದೆ. ಆದರೆ ಈ ಸುದ್ದಿ ಕೇಳಿ ಕರ್ನಾಟಕದ ಮಕ್ಕಳು ಖುಷಿಯಾಗುವಂತಿಲ್ಲ. ಏಕೆಂದರೆ ಇಂಥದ್ದೊಂದು ಸುದ್ದಿ ಕೇಳಿಬಂದಿರುವುದು ಮಹಾರಾಷ್ಟ್ರದಲ್ಲಿ. ಮಹಾರಾಷ್ಟ್ರದಲ್ಲಿ ಕರೊನಾ ಸೋಂಕು ವ್ಯಾಪಕವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ 1ರಿಂದ 8ನೇ ತರಗತಿ ವರೆಗಿನ ಮಕ್ಕಳನ್ನು ಪರೀಕ್ಷೆ ಇಲ್ಲದೆ ಮುಂದಿನ ತರಗತಿಗೆ ಪಾಸ್ ಮಾಡಲಾಗುವುದು. ಹಾಗೆಯೇ 9 ಮತ್ತು 11ನೇ ತರಗತಿ ಮಕ್ಕಳ ಕುರಿತ ನಿರ್ಧಾರ ಸದ್ಯದಲ್ಲೇ ಘೋಷಿಸಲಾಗುವುದು ಎಂದು ಮಹಾರಾಷ್ಟ್ರದ ಶಿಕ್ಷಣ ಸಚಿವೆ ವರ್ಷಾ ಗಾಯಕ್​ವಾಡ್ ತಿಳಿಸಿದ್ದಾರೆ.

    ಇದನ್ನೂ ಓದಿ: 10 ಲಕ್ಷ ಜನರಿಗೆ ಒಟ್ಟು 1,500 ಕೋಟಿ ರೂ. ಮೋಸ; ಬೆಂಗಳೂರಿನ ಕಂಪನಿಯ 24 ಜನರನ್ನು ಬಂಧಿಸಿದ ಸೈಬರಾಬಾದ್ ಪೊಲೀಸರು

    ಸೋಂಕು ಪ್ರಕರಣ ಹೆಚ್ಚಳ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಈಗಾಗಲೇ ಎಲ್ಲ ಶಿಕ್ಷಣ ಸಂಸ್ಥೆಗಳು ಮುಚ್ಚಲ್ಪಟ್ಟಿವೆ. ಕೆಲವು ಜಿಲ್ಲೆಗಳಲ್ಲಿ ಲಾಕ್​ಡೌನ್​ ಮಾಡಲಾಗಿದೆ. ಇನ್ನು ಪರಿಸ್ಥಿತಿ ಸುಧಾರಿಸದೇ ಇದ್ದರೆ ಲಾಕ್​ಡೌನ್ ತೆರವುಗೊಳಿಸುವುದಿಲ್ಲ ಎಂದು ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ಶುಕ್ರವಾರ ಹೇಳಿದ್ದರು.

    ಇಲ್ಲೆಲ್ಲ ಈ ಲಸಿಕೆ ಕೊಡುವುದು ನಿಲ್ಲಿಸಿದ್ದಾರಂತೆ!; ರಕ್ತಹೆಪ್ಪುಗಟ್ಟುತ್ತದೆ ಎಂಬ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ

    ನೈಟ್ ಕರ್ಫ್ಯೂ, ವೀಕೆಂಡ್ ಲಾಕ್‍ಡೌನ್ ಆಗುತ್ತಾ? ಸಚಿವ ಸುಧಾಕರ್​ ಏನು ಹೇಳಿದ್ರು ನೋಡಿ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts