ವಿದ್ಯಾರ್ಥಿಗಳಿಗೆ ಮಾದಕ ವ್ಯಸನ ದುಷ್ಪರಿಣಾಮ ಅರಿವು ಅಗತ್ಯ

byn
Published on

ವಿಜಯವಾಣಿ ಸುದ್ದಿಜಾಲ ಬೈಂದೂರು

ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾದಕ ವ್ಯಸನಿಗಳಾಗುತ್ತಿರುವುದು ಕಂಡು ಬರುತ್ತಿದೆ. ಇದರ ದುಷ್ಪರಿಣಾಮಗಳನ್ನು ಅರ್ಥಮಾಡಿಕೊಂಡು ಎಚ್ಚರಿಕೆಯಿಂದ ಬದುಕುವುದು ವಿದ್ಯಾರ್ಥಿಗಳ ಆದ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಹೇಳಿದರು.

ಜೆಸಿಐ ಉಪ್ಪುಂದ, ಬೈಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹಯೋಗದೊಂದಿಗೆ ಆಯೋಜಿಸಿದ್ದ ಕಾನೂನು ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಜೆಸಿಐ ಉಪ್ಪುಂದ ಅಧ್ಯಕ್ಷ ಭರತ್ ದೇವಾಡಿಗ ಅಧ್ಯಕ್ಷತೆ ವಹಿಸಿ ಮಾತನಾಡಿ, ಜೆಸಿಐ ಸಂಸ್ಥೆ ಮಾನವೀಯ ಸೇವೆಗಳೊಂದಿಗೆ ವ್ಯಕ್ತಿತ್ವ ವಿಕಸನ ಹಾಗೂ ಜೀವನದ ಕಲೆಯನ್ನು ಕಲಿಸುವುದರ ಮೂಲಕ ಸದೃಢ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿದೆ. ಯುವಕರು ಈ ಸಂಘಟನೆಗೆ ಸೇರುವ ಮೂಲಕ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಕಾಲೇಜಿನ ಸಾಧಕ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಸಿದ್ದಾಪುರ ಜ್ಞಾನಸರಸ್ವತಿ ವಿದ್ಯಾಲಯದ ಮ್ಯಾನೇಜಿಂಗ್ ಟ್ರಸ್ಟಿ ಬಿ.ಎಸ್.ಸುರೇಶ ಶೆಟ್ಟಿ, ಜಿಪಂ ಮಾಜಿ ಸದಸ್ಯ ಎಸ್.ಮದನಕುಮಾರ್, ಬೈಂದೂರು ವಲಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಶೇಖರ ಪೂಜಾರಿ, ಕಾಲೇಜಿನ ಪ್ರಾಂಶುಪಾಲ ನಾಗರಾಜ ಶೆಟ್ಟಿ, ಬೈಂದೂರು ಠಾಣಾಧಿಕಾರಿ ತಿಮ್ಮೇಶ್ ಬಿ.ಎನ್., ಬೈಂದೂರು ತಾಲೂಕು ಕೆಡಿಪಿ ಸದಸ್ಯ ಶೇಖರ ಪೂಜಾರಿ, ಶ್ರೀ ಸೇನೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗಿರೀಶ್ ಬೈಂದೂರು, ಉಪ್ಪುಂದ ಜೆಸಿಐ ಸ್ಥಾಪಕಾಧ್ಯಕ್ಷ ಎನ್.ದಿವಾಕರ ಶೆಟ್ಟಿ, ಕಾರ್ಯದರ್ಶಿ ಅಭಿಷೇಕ್, ಸೀನಿಯರ್ ಚೇಂಬರ್ ಅಧ್ಯಕ್ಷ ಶ್ರೀಕಾಂತ ಶೆಟ್ಟಿ ಗಂಟಿಹೊಳೆ, ಪೂರ್ವಾಧ್ಯಕ್ಷ ಪ್ರಭಾಕರ ಶೆಟ್ಟಿ, ಮಂಜುನಾಥ ಪೂಜಾರಿ ಇದ್ದರು. ಮಂಜುನಾಥ ದೇವಾಡಿಗ ಸ್ವಾಗತಿಸಿದರು. ಪ್ರಾಧ್ಯಾಪಕ ನವೀನ್ ಎಚ್.ಜಿ. ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net