ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಅಗತ್ಯ

lo
Published on

ಹಾಲಾಡಿ: ವಿದ್ಯಾರ್ಥಿಗಳಿಗೆ ಕಾನೂನಿನ ಮಹತ್ವ ಹಾಗೂ ಅರಿವು ಅಗತ್ಯ. ಈ ನಿಟ್ಟಿನಲ್ಲಿ ಸಂಘ-ಸಂಸ್ಥೆ ಹಮ್ಮಿಕೊಳ್ಳುವ ಕಾರ್ಯಕ್ರಮ ಹೆಚ್ಚು ಪ್ರಯೋಜನ ನೀಡಲಿದೆ ಎಂದು ಶಂಕರನಾರಾಯಣ ಠಾಣಾ ಉಪನಿರೀಕ್ಷಕ ನಾಸೀರ್ ಹುಸೇನ್ ಹೇಳಿದರು.

ಹಾಲಾಡಿ ಹೆಗ್ಗುಂಜೆ ರಾಜೀವ ಶೆಟ್ಟಿ ಸರ್ಕಾರಿ ಪ್ರೌಢಶಾಲೆಯಲ್ಲಿ ಆರ್ಡಿ ಬೆಳ್ವೆ ಗೋಳಿಯಂಗಡಿ ಲಯನ್ಸ್ ಕ್ಲಬ್ ವತಿಯಿಂದ ಲಯನ್ಸ್ ಕ್ಲಬ್ ಸ್ಥಾಪಕಾಧ್ಯಕ್ಷ ಬಿ.ರಾಜೇಂದ್ರ ಕಿಣಿ ಬೆಳ್ವೆ ಪ್ರಾಯೋಜಕತ್ವದಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮಾಹಿತಿ ಅರಿವು ಕಾರ್ಯಕ್ರಮದಲ್ಲಿ ಇತ್ತೀಚೆಗೆ ಮಾತನಾಡಿದರು.

ಲಯನ್ಸ್ ಕ್ಲಬ್ ವಲಯಾಧ್ಯಕ್ಷ ಎಚ್.ವಸಂತ ಕುಮಾರ್ ಶೆಟ್ಟಿ ಬೆಳ್ವೆ, ಆರ್ಡಿ ಬೆಳ್ವೆ ಗೋಳಿಯಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಎಸ್.ಜಯರಾಮ ಶೆಟ್ಟಿ ಸುರ‌್ಗೋಳಿ, ಕಾರ್ಯದರ್ಶಿ ಅಣ್ಣಯ್ಯ ಶೆಟ್ಟಿ, ಕೋಶಾಧಿಕಾರಿ ಜಯಪ್ರಕಾಶ್ ಶೆಟ್ಟಿ ಯಳಂತೂರು, ಪತ್ರಕರ್ತ ಕೆ.ಸಂಜೀವ ಆರ್ಡಿ, ಹಾಲಾಡಿ ಹೆಗ್ಗುಂಜೆ ರಾಜೀವ ಶೆಟ್ಟಿ, ಸರ್ಕಾರಿ ಪ್ರೌಢಶಾಲಾ ಮುಖ್ಯಶಿಕ್ಷಕಿ ರೋಶನ್ ಬೀಬಿ, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಸುಬ್ರಹ್ಮಣ್ಯ ಶೆಟ್ಟಿ ಮೊದಲಾದವರಿದ್ದರು. ಶಿಕ್ಷಕ ನಾಗೇಂದ್ರ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ರತ್ನಾಕರ ನಿರೂಪಿಸಿದರು. ಶಿಕ್ಷಕಿ ಮಾಲಿನಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net