More

    ವಿದ್ಯಾರ್ಥಿಗಳಿಗೆ ಎನ್‌ಇಪಿಯಿಂದ ಅನೇಕ ಪ್ರಯೋಜನ

    ರಾಯಚೂರು: ಶಿಕ್ಷಕರು ಪಾಠದೊಂದಿಗೆ ಸಂಶೋಧನಾ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳು ಶೋಧ ಕಾರ್ಯದಲ್ಲಿ ತೊಡಗುವಂತೆ ಪ್ರೇರೇಪಿಸಬೇಕು. ಈ ಮೂಲಕ ವಿದ್ಯಾರ್ಥಿಗಳನ್ನು ಸೃಜನಶೀಲರನ್ನಾಗಿ ಮಾಡಬೇಕು ಎಂದು ನ್ಯಾಕ್ ಸಮಿತಿ ನಿರ್ದೇಶಕ ಪ್ರೊ.ಎಸ್.ಸಿ.ಶರ್ಮಾ ಹೇಳಿದರು.

    ಎಲ್‌ವಿಡಿ ಕಾಲೇಜಿನಲ್ಲಿ ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಅನುದಾನಿತ ಪದವಿ ಕಾಲೇಜು ಉಪನ್ಯಾಸಕರಿಗಾಗಿ ಹಮ್ಮಿಕೊಂಡಿದ್ದ ಎನ್‌ಇಪಿ-2020 ಕುರಿತು ಕಾರ್ಯಾಗಾರ ಉದ್ಘಾಟಿಸಿ ಬುಧವಾರ ಮಾತನಾಡಿದರು. ಎನ್‌ಇಪಿಯಿಂದ ವಿದ್ಯಾರ್ಥಿಗಳಿಗೆ ಸಾಕಷ್ಟು ಲಾಭಗಳಿವೆ. ಪ್ರಸ್ತುತ ದಿನಮಾನದಲ್ಲಿ ಶಿಕ್ಷಣದ ಡಿಜಿಟಲೀಕರಣ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಶಿಕ್ಷಕರು ಬದಲಾಗಬೇಕಾದ ಅವಶ್ಯವಿದೆ ಎಂದು ಹೇಳಿದರು.

    ತಾರಾನಾಥ ಶಿಕ್ಷಣ ಸಂಸ್ಥೆ ಅಧ್ಯಕ್ಷ ಪಾರಸಮಲ್ ಸುಖಾಣಿ ಮಾತನಾಡಿ, ರಾಷ್ಟ್ರೀಯ ಶಿಕ್ಷಣ ನೀತಿ ವಿಶೇಷತೆಗಳನ್ನು ಶಿಕ್ಷಕರು ಅರ್ಥ ಮಾಡಿಕೊಂಡು ವಿದ್ಯಾರ್ಥಿಗಳಿಗೆ ಅದರ ಬಗ್ಗೆ ತಿಳಿವಳಿಕೆ ನೀಡುವ ಕೆಲಸ ಮಾಡಬೇಕು. ಶಿಕ್ಷಣದೊಂದಿಗೆ ಕಲೆ, ಕೌಶಲ, ಸಂಸ್ಕಾರ ಕಲಿಸುವ ಮೂಲಕ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಪ್ರೋತ್ಸಾಹಿಸಬೇಕು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts