ಮೈಸೂರು: ವಿಜಯನಗರದಲ್ಲಿರುವ ಶ್ರೀ ಕಲಾನಿಕೇತನ ಸ್ಕೂಲ್ ಆಫ್ ವಿಜುವಲ್ ಆರ್ಟ್ಸ್ ಆಡಳಿತ ಮಂಡಳಿ ವಿನಾಕಾರಣ ಹೆಚ್ಚಿನ ಶುಲ್ಕ ವಸೂಲಿ ಮಾಡುತ್ತಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ವಿಶ್ವವಿದ್ಯಾಲಯ ನಿಗದಿ ಪಡಿಸಿರುವ ಶುಲ್ಕಕ್ಕಿಂತಲೂ ವಿದ್ಯಾರ್ಥಿಗಳಿಂದ ಹೆಚ್ಚಿನ ಶುಲ್ಕ ವಸೂಲಿ ಮಾಡಲಾಗುತ್ತಿದೆ. ಸರ್ಕಾರವೇ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರಿಗೆ ಶುಲ್ಕ ವಿನಾಯಿತಿ ನೀಡಿದ್ದರೂ, ಆಡಳಿತ ಮಂಡಳಿ ಶುಲ್ಕ ವಸೂಲಿ ಮಾಡುತ್ತಿದೆ. ವಿಶ್ವವಿದ್ಯಾಲಯ ನಿಗದಿ ಪಡಿಸುವ ಶುಲ್ಕದ ಸುತ್ತೋಲೆ ನೀಡುವಂತೆ ಎಷ್ಟೇ ಮನವಿ ಮಾಡಿದರೂ ಅದರ ಪ್ರತಿ ನೀಡುತ್ತಿಲ್ಲ ಎಂದು ದೂರಿದರು.
ಗ್ರಾಫಿಕ್ ಸೇರಿದಂತೆ ಇನ್ನಿತರ ವಿಭಾಗದಲ್ಲಿ ಆಗಾಗ್ಗೆ ಶುಲ್ಕವನ್ನು ವಸೂಲಿ ಮಾಡುತ್ತಿದ್ದು, ಆಡಳಿತ ಮಂಡಳಿ ನೇಮಿಸಿಕೊಂಡಿರುವ ಖಾಸಗಿ ಶಿಕ್ಷಕರಿಗೆ ವೇತನಕ್ಕಾಗಿ ವಿದ್ಯಾರ್ಥಿಗಳಿಂದಲೇ ಒತ್ತಾಯಪೂರಕವಾಗಿ ಹಣ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಈ ಎಲ್ಲ ವಿವರಗಳ ಕುರಿತು ಆಡಳಿತ ಮಂಡಳಿ ಹಿಂಬರಹದ ಜತೆಗೆ, ಸರ್ಕಾರ, ವಿಶ್ವವಿದ್ಯಾಲಯದ ಆದೇಶ ಪ್ರತಿ ನೀಡಬೇಕು ಎಂದು ಒತ್ತಾಯಿಸಿ ಮನವಿ ಸಲ್ಲಿಸಿದರು.
ವಿದ್ಯಾರ್ಥಿ ಮುಖಂಡರಾದ ಮಂಜು, ಸದೈಕುಮಾರ್, ಮಹದೇವಸ್ವಾಮಿ, ಶ್ರೀಕಾಂತ್, ಪುರುಷೋತ್ತಮ, ಮನುಕುಮಾರ್, ದರ್ಶನ್‌ಕುಮಾರ್, ಅನುಶ್ರೀ, ಮಮತಾ, ಜೂಲಿಯೆಟ್, ನಂದಿತಾ, ರೋಜಾ, ಶರಣ್ಯಾ, ಸಿಂಧು, ಸೌಂದರ್ಯಾ ಇತರರು ಇದ್ದರು.
ಹೆಚ್ಚು ಶುಲ್ಕ ವಸೂಲಿಗೆ ವಿದ್ಯಾರ್ಥಿಗಳ ವಿರೋಧ

You Might Also Like
ಬೇಸಿಗೆಯಲ್ಲಿ ಕೋಳಿ ಅಥವಾ ಮೀನು?; ತಿನ್ನಲು ಯಾವ ಮಾಂಸ ಉತ್ತಮ? ಇಲ್ಲಿದೆ ಮಾಹಿತಿ.. | Meat
Meat : ಸಾಮಾನ್ಯವಾಗಿ ಬೇಸಿಗೆಯಲ್ಲಿ ಅಧಿಕ ಜನರು ತಂಪುಪಾನಿಯಗಳನ್ನು ಸೇವಿಸುತ್ತಾರೆ. ಈ ಸಮಯದಲ್ಲಿ ಹೆಚ್ಚಿನವರು ಹಗುರವಾದ(ಮೃದುವಾದ)…
ಹಗಲಿನಲ್ಲಿ ನಿದ್ದೆ ಮಾಡ್ತೀರಾ? Daytime Sleeping ಒಳ್ಳೆಯದೋ… ಕೆಟ್ಟದೋ..? sleeping
sleeping: ಸಾಮಾನ್ಯವಾಗಿ, ಅನೇಕ ಜನರು ಹಗಲಿನಲ್ಲಿ ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ ಹಗಲಿನಲ್ಲಿ…
ಪ್ರತಿದಿನ ಬೆಳಗ್ಗೆ ಎಳನೀರು ಕುಡಿಯುತ್ತೀರಾ? ಹಾಗಿದ್ರೆ ಇದು ನಿಮಗೆ ಗೊತ್ತಿರಲಿ…coconut water
coconut water: ಬೇಸಿಗೆಯಲ್ಲಿ ದೇಹವನ್ನು ಹೈಡ್ರೀಕರಿಸಲು ನೀರಿನ ಜತೆ ನೈಸರ್ಗಿಕ ಆರೋಗ್ಯಕರ ಪಾನೀಯಗಳನ್ನು ಕುಡಿಯುವುದು ಒಳ್ಳೆಯದು.…