More

    ಕುಡಿಯುವ ನೀರಿಗಾಗಿ ರಸ್ತೆ ತಡೆದು ಪ್ರತಿಭಟಿಸಿದ ವಿದ್ಯಾರ್ಥಿಗಳು

    ಕಾರವಾರ: ಬೇಸಿಗೆಯಲ್ಲಿ ಕೆಲವು ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದ್ದು, ಅನೇಕ ಭಾಗಗಳಲ್ಲಿ ನೀರಿನ ಅಭಾವ ಸೃಷ್ಟಿಯಾಗಿದೆ. ಆದರೆ ಇಲ್ಲೊಂದು ಶಾಲೆಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಸರಿ ಇಲ್ಲದ ಕಾರಣ ವಿದ್ಯಾರ್ಥಿಗಳು ರಸ್ತೆ ತಡೆದು ಪ್ರತಿಭಟಿಸುತ್ತಿದ್ದಾರೆ.

    ಉತ್ತರಕನ್ನಡ ಜಿಲ್ಲೆಯ ಮುಂಡಗೋಡಿನ ಸಿಂಗನಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಕಳೆದ 17 ದಿನಗಳಿಂದ ನೀರಿಲ್ಲದೇ ವಿದ್ಯಾರ್ಥಿಗಳ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ವಿದ್ಯಾರ್ಥಿಗಳು ಕುಡಿಯುವ ನೀರಿಗಾಗಿ ಖಾಲಿ ಕೊಡದೊಂದಿಗೆ ರಸ್ತೆ ತಡೆದು ಪ್ರತಿಭಟನೆ ಮಾಡುತ್ತಿದ್ದಾರೆ.

    ಇದನ್ನೂ ಓದಿ: ತಡವಾಗಿ ಬಂದ ವೈದ್ಯರು; ಆಸ್ಪತ್ರೆ ಆವರಣದಲ್ಲಿಯೇ ಮಗುವಿಗೆ ಜನ್ಮಕೊಟ್ಟ ಮಹಿಳೆ

    ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಪ್ರತಿನಿಧಿಸುವ ಕ್ಷೇತ್ರ ಇದಾಗಿದ್ದು, ಶಾಲೆಯಲ್ಲಿ ಕುಡಿಯುವ ನೀರಿಲ್ಲದೆ ಬಿಸಿಯೂಟದಲ್ಲಿ ಸಮಸ್ಯೆ ಉಂಟಾಗಿದೆ. ಗಮನಕ್ಕೆ ತಂದ್ರೂ ಕ್ಯಾರೇ ಎನ್ನದ ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ವಿದ್ಯಾರ್ಥಿಗಳು ನಮಗೆ ನೀರು ಕೊಡಿ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಕಾಂಗ್ರೆಸ್‌ ಅಧಿಕಾರಕ್ಕೆ ಬಂದ್ರೆ ಕಪಾಲಿ ಬೆಟ್ಟ ಯೇಸು ಬೆಟ್ಟವಾಗುವುದು ಖಚಿತ: ಪ್ರತಾಪ್ ಸಿಂಹ

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts