More

    ಶಕ್ತಿ ಯೋಜನೆ ಎಫೆಕ್ಟ್​; ಸಮರ್ಪಕ ಬಸ್​ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

    ಚಾಮರಾಜನಗರ: ಸಮರ್ಪಕ ಬಸ್​ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನಲ್ಲಿ ನಡೆದಿದೆ.

    ಶುಕ್ರವಾರ ಬೆಳಗ್ಗೆ 8 ಘಂಟೆ ಸುಮಾರಿಗೆ KSRTC ಬಸ್​ ಸ್ಟ್ಯಾಂಡ್​ ಮುಂಭಾಗ ಜಮಾಯಿಸಿದ ವಿದ್ಯಾರ್ಥಿಗಳ ಗುಂಪು ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿ ಸಾರಿಗೆ ಇಲಾಖೆಯ ಅಧಿಕಾರಿಗಳ ವಿರುದ್ಧ ಆಕ್ರೋಶವನ್ನು ಹೊರಹಾಕಿದರು.

    ಇದೇ ಮೊದಲಲ್ಲ

    ಈ ಹಿಂದೆ ವಿದ್ಯಾರ್ಥಿಗಳು ಸಮರ್ಪಕ ಬಸ್​ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ 5ಕ್ಕೂ ಹೆಚ್ಚು ಬಾರಿ ಪ್ರತಿಭಟನೆ ನಡೆಸಿ ಕೆಎಸ್​ಆರ್​ಟಿಸಿ ಅಧಿಕಾರಿಗಳಿಗೆ ಮನವಿ ಪತ್ರವನ್ನು ನೀಡಿದ್ದರು. ಆದರೆ, ಅಧಿಕಾರಿಗಳ ಬೇಜವಾಬ್ದಾರಿತನದಿಂದಾಗಿ ಇದುವರೆಗೂ ಸಮಯಕ್ಕೆ ಸರಿಯಾಗಿ ಬಸ್​ ಬಾರದಿರುವುದಕ್ಕೆ ಮತ್ತೊಮ್ಮೆ ಪ್ರತಿಭಟನೆ ನಡೆಸಿದ್ಧಾರೆ.

    ಇದನ್ನೂ ಓದಿ: ಕೇಂದ್ರಕ್ಕೆ ಹಸಿದ ಹೊಟ್ಟೆ‌ ತೋರಿಸಿದರೆ ಮಸೆದ ಕತ್ತಿ ತೋರಿಸದಿರುತ್ತದೆಯೇ: ದಿನೇಶ್​ ಗುಂಡೂರಾವ್

    ಶಾಲಾ-ಕಾಲೇಜುಗಳಿಗೆ ತೆರಳಲು ಸರಿಯಾದ ಬಸ್​ ವ್ಯವಸ್ಥೆ ಇಲ್ಲ. ಇದರಲ್ಲಿ ಸರ್ಕಾರ ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆಯನ್ನು ಘೊಷಿಸಿದೆ. ಈ ನಿಟ್ಟಿನಲ್ಲಿ ಅಜ್ಜಿಪುರ, ರಾಮಾಪುರ, ಬೈಲೂರು -ಒಡೆಯರಪಾಳ್ಯ, ಪಿ ಜಿ ಪಾಳ್ಯ, ಬಂಡಳ್ಳಿ ಮಾರ್ಗವಾಗಿ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

    ಯಾವುದೇ ಪ್ರಯೋಜನವಾಗಿಲ್ಲ

    ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರತಿಕ್ರಿಯಿಸಿರುವ ಹನೂರು ಶಾಸಕ ಎಂ.ಆರ್​. ಮಂಜುನಾಥ್​ ಜೂನ್​ 11ರಂದು ಶಕ್ತಿ ಯೋಜನೆಗೆ ಚಾಲನೆ ನೀಡಿದ ಬಳಿಕ ವಿದ್ಯಾರ್ಥಿಗಳಿಗೆ ಹೆಚ್ಚುವರಿ ಬಸ್​ ಸೌಲಭ್ಯ ಒದಗಿಸುವಂತೆ ವ್ಯವಸ್ಥಾಪಕರಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ.

    ಈ ಭಾಗದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಸಂಬಂಧಪಟ್ಟ KSRTC ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರತಿಭಟನಾ ವಿದ್ಯಾರ್ಥಿಗಳನ್ನು ಭೇಟಿ ಮಾಡಿದ ಬಳಿಕ ಹನೂರು ಶಾಸಕ ಎಂ.ಆರ್​. ಮಂಜುನಾಥ್ ತಿಳಿಸಿದ್ಧಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts